ನಟ  ಗೋಲ್ಡನ್ ಸ್ಟಾರ್ ಗಣೇಶ್ ಅವರ ತಂದೆ ರಾಮಕೃಷ್ಣಪ್ಪ ಅವರು ಸೋಮವಾರ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರಿಗೆ ಬಿಜಿಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. 

ಬೆಂಗಳೂರು :  ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ‘ಗೋಲ್ಡನ್‌ ಸ್ಟಾರ್‌’ ಗಣೇಶ್‌ ಅವರ ತಂದೆ ರಾಮಕೃಷ್ಣಪ್ಪ ಅಲಿಯಾಸ್‌ ಕಿಶನ್‌ (82) ನಿಧನರಾಗಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕಳೆದ ಕೆಲ ದಿನಗಳಿಂದ ಬಿಜಿಎಸ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ರಾಮಕೃಷ್ಣಪ್ಪ ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ ಸಂಜೆ ಕೊನೆಯುಸಿರೆಳೆದರು.

ಮೃತರ ಅಂತ್ಯ ಸಂಸ್ಕಾರವು ನೆಲಮಂಗಲ ಬಳಿಯ ಅಡಕಮಾರನಹಳ್ಳಿಯಲ್ಲಿ ಮಂಗಳವಾರ ನೆರವೇರಲಿದೆ.