ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್..!

news | Thursday, March 8th, 2018
Suvarna Web Desk
Highlights

ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ. ನೌಕರರ ತುಟ್ಟಿಭತ್ಯೆಯನ್ನು ಸರ್ಕಾರ ಶೇ.2ರಷ್ಟುಹೆಚ್ಚಿಸಿ ನಿರ್ಧಾರ ಕೈಗೊಂಡಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ಪ್ರಮಾಣವನ್ನು ಈಗಿರುವ ಶೇ.5ರಿಂದ ಶೇ.7ಕ್ಕೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಯಿತು.

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ. ನೌಕರರ ತುಟ್ಟಿಭತ್ಯೆಯನ್ನು ಸರ್ಕಾರ ಶೇ.2ರಷ್ಟುಹೆಚ್ಚಿಸಿ ನಿರ್ಧಾರ ಕೈಗೊಂಡಿದೆ. ಬುಧವಾರ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ತುಟ್ಟಿಭತ್ಯೆ ಪ್ರಮಾಣವನ್ನು ಈಗಿರುವ ಶೇ.5ರಿಂದ ಶೇ.7ಕ್ಕೆ ಹೆಚ್ಚಿಸಲು ನಿರ್ಧಾರ ಕೈಗೊಳ್ಳಲಾಯಿತು.

ಜನವರಿ 1, 2017ರಿಂದಲೇ ತುಟ್ಟಿಭತ್ಯೆ ಏರಿಕೆ ಪೂರ್ವಾನ್ವಯ ವಾಗಲಿದೆ. ಸರ್ಕಾರದ ಈ ನಿರ್ಧಾರದಿಂದ 50 ಲಕ್ಷ ನೌಕರರು ಹಾಗೂ 61 ಲಕ್ಷ ಪಿಂಚಣಿದಾರರಿಗೆ ಅನುಕೂಲವಾಗಲಿದೆ.

ಈಗ ಮೂಲ ವೇತನದ ಶೇ.5ರಷ್ಟುತುಟ್ಟಿಭತ್ಯೆ ನೀಡಲಾಗುತ್ತದೆ. ಹಣದುಬ್ಬರವನ್ನು ಆಧರಿಸಿ ನೌಕರರ ಜೀವನಕ್ಕೆ ಅನುಕೂಲವಾಗಲೆಂದು ತುಟ್ಟಿಭತ್ಯೆಯನ್ನು ಕಾಲಕಾಲಕ್ಕೆ ಪರಿಷ್ಕರಿಸಲಾಗುತ್ತದೆ.

Comments 0
Add Comment