ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಈ ಸೌಲಭ್ಯ ಕಲ್ಪಿಸಲಾಗಿತ್ತು.

ಬೆಂಗಳೂರು(ಮಾ.21): ಎಸ್'ಎಸ್'ಎಲ್'ಸಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದೆ. ಮಾರ್ಚ್ 30 ರಿಂದ ಆರಂಭವಾಗಲಿರುವ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್'ಟಿಸಿ ಬಸ್'ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಸಾರಿಗೆ ಇಲಾಖೆ ಅವಕಾಶ ಕಲ್ಪಿಸಿದೆ. ಒಂದು ವೇಳೆ ಪರೀಕ್ಷೆ ಅವಧಿ ಮುಗಿದಿದ್ದರೂ ಉಚಿತವಾಗಿ ಪ್ರಯಾಣಿಸಬಹುದು. ವಿದ್ಯಾರ್ಥಿಗಳು ತಮ್ಮ ಹಾಲ್ ಟಿಕೇಟ್ ತೋರಿಸಿ ತಮ್ಮ ಪರೀಕ್ಷೆ ಕೇಂದ್ರವಿರುವ ಪಟ್ಟಣ ಹಾಗೂ ಗ್ರಾಮಗಳಿಗೆ ಬಸ್'ನಲ್ಲಿ ತೆರಳಬಹುದು. ಪ್ರಸ್ತುತ ನಡೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೂ ಈ ಸೌಲಭ್ಯ ಕಲ್ಪಿಸಲಾಗಿತ್ತು.

Add Asianetnews Kannada as a Preferred SourcegooglePreferred