ಅಂತೂ-ಇಂತೂ ಮಲೆನಾಡು ಭಾಗದಿಂದ ಶಿವಮೊಗ್ಗ ಮಾರ್ಗವಾಗಿ ಬೆಂಗಳೂರಿಗೆ ಬರುವ ಲಕ್ಷಾಂತರ ಜನರಿಗೆ ಅನುಕೂಲವಾಗುವಂತಹ ಸುದ್ದಿ ಬಂದಿದೆ. ಶಿವಮೊಗ್ಗ-ಬೆಂಗಳೂರು ಇಂಟರ್ ಸಿಟಿ ರೈಲನ್ನು ತಾಳಗುಪ್ಪದವರೆಗೆ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು[ ಅ. 04] ಕೇಂದ್ರ ಸರ್ಕಾರ ಶಿವಮೊಗ್ಗ-ಬೆಂಗಳೂರು ಇಂಟರ್ ಸಿಟಿ ರೈಲನ್ನು ತಾಳಗುಪ್ಪದವರೆಗೆ ವಿಸ್ತರಿಸಿದೆ. ಶಿವಮೊಗ್ಗ ಸಂಸದರಾಗಿದ್ದ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅವರು ಶಿವಮೊಗ್ಗ-ಬೆಂಗಳೂರು ಇಂಟರ್ ಸಿಟಿ ರೈಲನ್ನು ತಾಳಗುಪ್ಪವರೆಗೆ ವಿಸ್ತರಣೆ ಮಾಡಲು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದರು. ಈಗ ಸರ್ಕಾರ ಇದಕ್ಕೆ ಒಪ್ಪಿಗೆ ನೀಡಿದ್ದು ಬಿಎಸ್ ವೈ ಸ್ವಾಗತ ಮಾಡಿದ್ದಾರೆ.

ಪ್ರಸ್ತುತ ಶಿವಮೊಗ್ಗ-ಬೆಂಗಳೂರು ನಡುವೆ ಚಲಿಸುತ್ತಿರುವ ಇಂಟರ್ ಸಿಟಿ ರೈಲು ಸಂಖ್ಯೆ 20651 ಮತ್ತು 20652 ಗಳನ್ನು ತಾಳಗುಪ್ಪದವರೆಗೆ ವಿಸ್ತರಿರಣೆ ಮಾಡಲಾಗಿದೆ. ಬೆಳಗಿನ ಜಾವ 3.50 ಕ್ಕೆ ತಾಳಗುಪ್ಪದಿಂದ ಹೊರಟು ಬೆಂಗಳೂರಿಗೆ ಬೆಳಗ್ಗೆ 11.35 ಕ್ಕೆ ತಲುಪಲಿದೆ. ಇಲ್ಲಿಂದ ಅಂದರೆ ಬೆಂಗಳೂರಿನಿಂದ ಮಧ್ಯಾಹ್ನ 3 ಗಂಟೆಗೆ ಹೊರಟು ರಾತ್ರಿ 10.15 ಕ್ಕೆ ತಾಳಗುಪ್ಪ ತಲುಪಲಿದೆ.

ಬೆಂಗಳೂರು ಮತ್ತು ಶಿವಮೊಗ್ಗ ಮಧ್ಯೆ ಸೂಪರ್ ಪಾಸ್ಟ್ ಎಕ್ಸ್‌ಪ್ರೆಸ್‌ ರೈಲಾಗಿ ಚಲಿಸುವ ರೈಲು ಶಿವಮೊಗ್ಗ ಮತ್ತು ತಾಳಗುಪ್ಪ ಮಧ್ಯೆ ಎಕ್ಸ್‌ಪ್ರೆಸ್‌ ರೈಲಾಗಿ ಬದಲಾಗಲಿದೆ.ಶಿವಮೊಗ್ಗ ತಾಳಗುಪ್ಪ ಮಧ್ಯೆ ಆನಂದಪುರ ಮತ್ತು ಸಾಗರದಲ್ಲಿ ನಿಲುಗಡೆಗೆ ಸೂಚನೆ ನೀಡಲಾಗಿದೆ.

Scroll to load tweet…
Scroll to load tweet…