ತಮ್ಮ ಮಗಳ ಹತ್ಯೆ ತನಿಖೆಯನ್ನು ರಾಜ್ಯ ಸರ್ಕಾರದ ಎಸ್ಐಟಿ ನಡೆಸಲಿ ಸಿಬಿಐ ತನಿಖೆ ಬೇಡ ಎಂದು ಹತ್ಯೆಗೊಳಗಾದ ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಬೆಂಗಳೂರು(ಸೆ.09): ತಮ್ಮ ಮಗಳ ಹತ್ಯೆ ತನಿಖೆಯನ್ನು ರಾಜ್ಯ ಸರ್ಕಾರದ ಎಸ್ಐಟಿ ನಡೆಸಲಿ ಸಿಬಿಐ ತನಿಖೆ ಬೇಡ ಎಂದು ಹತ್ಯೆಗೊಳಗಾದ ಗೌರಿ ಲಂಕೇಶ್ ತಾಯಿ ಇಂದಿರಾ ಲಂಕೇಶ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.
ಸಿಎಂ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಗೌರಿ ಲಂಕೇಶ್ ಹತ್ಯೆ ಕುರಿತು ಸೂಕ್ತ ತನಿಖೆ ನಡೆಸಿ ಶೀಘ್ರ ತನಿಖೆ ಪೂರ್ಣಗೊಳಿಸುವಂತೆ ಮನವಿ ಮಾಡಿದ್ದಾರೆ. ಕುಟುಂಬಸ್ಥರ ಅಳಲು ಕೇಳಿದ ಸಿಎಂ ಸಿದ್ದರಾಮಯ್ಯ ಆರೋಪಿಗಳನ್ನು ಶೀಘ್ರ ಬಂಧಿಸುವುದಾಗಿ ಭರವಸೆ ನೀಡಿದ್ದಾರೆ. ಇಂದಿರಾ ಲಂಕೇಶ್ ಜೊತೆ ಜನವಾದಿ ಮಹಿಳಾ ಸಂಘದ ಸದಸ್ಯೆ ವಿಮಲಾ ಕೂಡ ಉಪಸ್ಥಿತರಿದ್ದರು. ಸಿಎಂ ನಿವಾಸಕ್ಕೆ ಕವಿತಾ ಲಂಕೇಶ್ ಹಾಗೂ ಇಂದ್ರಜಿತ್ ಲಂಕೇಶ್ ಕೂಡ ಆಗಮಿಸುವ ಸಾಧ್ಯತೆ ಇದೆ.
