ಗಡಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾದ ಸಂದರ್ಭದಲ್ಲಿ ಸಮಗ್ರ ನಿರ್ಧಾರ ಕೈಗೊಳ್ಳುವುದು ಈಗಿನ ಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೂರೂ ವಿಭಾಗಗಳ ಮುಖ್ಯಸ್ಥರ ಮೇಲೆ ಮತ್ತೊಬ್ಬರನ್ನು ನೇಮಿಸುವ ಪ್ರಸ್ತಾಪ ಹಿಂದಿನಿಂದಲೂ ಇತ್ತು.
ನವದೆಹಲಿ(ಅ.30): ಭಾರತೀಯ ಸೇನೆಯ ಮೂರು ವಿಭಾಗಗಳಿಗೆ ಮುಖ್ಯಸ್ಥರೊಬ್ಬರನ್ನು ಕೇಂದ್ರ ಸರ್ಕಾರ ಶೀಘ್ರವೇ ನೇಮಿಸಲು ಸರ್ಕಾರ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.
ಭೂ ಸೇನೆ, ವಾಯು ಸೇನೆ ಮತ್ತು ನೌಕಾ ಸೇನೆಗೆ ಹಾಲಿ ಒಬ್ಬೊಬ್ಬ ಪ್ರತ್ಯೇಕ ಮುಖ್ಯಸ್ಥರಿದ್ದಾರೆ. ಇವರೆಲ್ಲಾ ರಕ್ಷಣಾ ಸಚಿವರು ಮತ್ತು ಸಾಂವಿಧಾನಿಕ ಹುದ್ದೆ ಹೊಂದಿರುವ ರಾಷ್ಟ್ರಪತಿಯವರ ಕೆಳಗಡೆ ಕಾರ್ಯನಿರ್ವಹಿಸುತ್ತಾರೆ. ಆದರೆ, ಗಡಿಯಲ್ಲಿ ಬಿಕ್ಕಟ್ಟು ಸೃಷ್ಟಿಯಾದ ಸಂದರ್ಭದಲ್ಲಿ ಸಮಗ್ರ ನಿರ್ಧಾರ ಕೈಗೊಳ್ಳುವುದು ಈಗಿನ ಸ್ಥಿತಿಯಲ್ಲಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಮೂರೂ ವಿಭಾಗಗಳ ಮುಖ್ಯಸ್ಥರ ಮೇಲೆ ಮತ್ತೊಬ್ಬರನ್ನು ನೇಮಿಸುವ ಪ್ರಸ್ತಾಪ ಹಿಂದಿನಿಂದಲೂ ಇತ್ತು.
ಅದನ್ನೀಗ ಕಾರ್ಯರೂಪಕ್ಕೆ ತರಲು ರಕ್ಷಣಾ ಸಚಿವಾಲಯ ನಿರ್ಧರಿಸಿದ್ದು, ಶೀಘ್ರವೇ ಈ ಕುರಿತು ನಿರ್ಧಾರ ಪ್ರಕಟಿಸಲಿದೆ ಎಂದು ಮೂಲಗಳು ತಿಳಿಸಿವೆ. 1999ರ ಕಾರ್ಗಿಲ್ ಯುದ್ಧದ ಬಳಿಕ ದೇಶದ ಭದ್ರತಾ ವ್ಯವಸ್ಥೆಯಲ್ಲಿನ ನ್ಯೂನತೆ ಪರಿಶೀಲಿಸಲು ರಚಿಸಲಾಗಿದ್ದ ಉನ್ನತ ಮಟ್ಟದ ಸಮಿತಿ, ಮುಖ್ಯ ರಕ್ಷಣಾ ಅಧಿಕಾರಿಯನ್ನು ರಕ್ಷಣಾ ಸಚಿವಾಲಯಕ್ಕೆ ಏಕೈಕ ರಕ್ಷಣಾ ಸಲಹೆಗಾರರಾಗಿ ನೇಮಿಸಲು ಸಲಹೆ ನೀಡಿತ್ತು.
