ಪದವಿ ಕಾಲೇಜುಗಳಲ್ಲಿ ಹೊಸದಾಗಿ ಕಡ್ಡಾಯ ಕೋರ್ಸ್

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 3, Aug 2018, 10:35 AM IST
Government plans to make yoga must in Degree Colleges
Highlights

ರಾಜ್ಯದ ಎಲ್ಲ ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಹಾಗೂ ಕಾಲೇಜುಗಳಲ್ಲಿ ಹೊಸದಾಗಿ  ಈ ಕೋರ್ಸ್ ಗಳನ್ನು ಆರಂಭಿಸುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಸೂಚನೆ ನೀಡಿದ್ದಾರೆ. 

ಬೆಂಗಳೂರು :  ಪ್ರಸಕ್ತ 2018 - 19 ನೇ ಸಾಲಿನಿಂದ ರಾಜ್ಯದ ಎಲ್ಲ ಸರ್ಕಾರಿ, ಅನುದಾನಿತ ಮತ್ತು ಖಾಸಗಿ ವಿಶ್ವವಿದ್ಯಾಲಯಗಳು ಹಾಗೂ ಕಾಲೇಜುಗಳಲ್ಲಿ ಯೋಗ ಕೋರ್ಸ್ ಗಳನ್ನು ಕಡ್ಡಾಯವಾಗಿ ಆರಂಭಿಸುವಂತೆ ಉನ್ನತ ಶಿಕ್ಷಣ ಸಚಿವ ಜಿ.ಟಿ. ದೇವೇಗೌಡ ಸೂಚನೆ ನೀಡಿದ್ದಾರೆ. 

ಉನ್ನತ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಇದೇ ಮೊದಲ ಬಾರಿಗೆ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳು, ಕುಲ ಸಚಿವರು ಮತ್ತು ಮೌಲ್ಯಮಾಪನ ಕುಲಸಚಿವರು ಹಾಗೂ ಆರ್ಥಿಕ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಎರಡು ದಿನಗಳ ಸಭೆ ನಡೆಸಿದ ಬಳಿಕ ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. 

ಎನ್‌ಸಿಸಿ ಮಾದರಿಯಲ್ಲಿ ರಾಜ್ಯದ ಎಲ್ಲ ವಿಶ್ವವಿದ್ಯಾಲಯ, ಪದವಿ ಹಾಗೂ ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ಯೋಗ ಕೋರ್ಸ್ಗರ್ಳನ್ನು ಆರಂಭಿಸಲಾಗುತ್ತದೆ. ಈಗಾಗಲೇ ಡಿಪ್ಲೊಮೋ ಮತ್ತು ಸ್ನಾತಕೋತ್ತರ ಕೋಸ್ ಗರ್ಳನ್ನು ನಡೆಸಲಾಗುತ್ತಿದೆ. ಉಳಿದ ಕಾಲೇಜು  ಗಳಲ್ಲಿ ಪ್ರಸಕ್ತ ಸಾಲಿನಿಂದಲೇ ಆರಂಭಿಸುವಂತೆ ಸೂಚನೆ ನೀಡಲಾಗಿದೆ. ಯಾವ ರೀತಿಯ ಕೋರ್ಸ್‌ಗಳನ್ನು ಆರಂಭಿಸಬೇಕು ಎಂಬುದನ್ನು ನಿರ್ಧರಿಸಲು ಸಮಿತಿ ಕೂಡ ರಚಿಸಲಾಗುವುದು ಎಂದರು.

loader