Asianet Suvarna News Asianet Suvarna News

ತೀವ್ರ ಕಲ್ಲಿದ್ದಲು ಕೊರತೆ; ಮತ್ತೆ ಲೋಡ್ ಶೆಡ್ಡಿಂಗ್ ?

ತೀವ್ರ ಕಲ್ಲಿದ್ದಲು ಕೊರತೆ ಎದುರಿಸುತ್ತಿದೆ ಕರ್ನಾಟಕ | ಲೋಡ್ ಶೆಡ್ಡಿಂಗ್ ಮಾಡುವ ಬಗ್ಗೆ ಸರ್ಕಾರ ಚಿಂತನೆ | ಮುಂದಿನ ದಿನಗಳಲ್ಲಿ ವಿದ್ಯುತ್ ಕಡಿತ ಸಾಧ್ಯತೆ 

Government think to load shedding in state due to coal scarcity
Author
Bengaluru, First Published Oct 24, 2018, 11:59 AM IST

ಬೆಂಗಳೂರು (ಅ. 24): ತೀವ್ರವಾಗಿ ಕಲ್ಲಿದ್ದಲು ಕೊರತೆ ಎದುರಿಸುತ್ತಿರುವ ಪರಿಣಾಮ ರಾಜ್ಯದಲ್ಲಿ ಲೋಡ್‌ಶೆಡ್ಡಿಂಗ್ ಮಾಡುವ ಸಾಧ್ಯತೆ ಇದ್ದು, ಕಲ್ಲಿದ್ದಲು ಸಮಸ್ಯೆಯಿಂದಾಗಿ ವಿದ್ಯುತ್ ಕಡಿತಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ತಿಳಿದುಬಂದಿದೆ.

ಕಲ್ಲಿದ್ದಲು ಸಮಸ್ಯೆಯಿಂದಾಗಿ ಶಾಖೋತ್ಪನ್ನ ವಿದ್ಯುತ್ ಉತ್ಪಾದ ನೆಗೆ ತೊಂದರೆಯಾಗಿದೆ. ಹೀಗಾಗಿ ಈ ಸಮಸ್ಯೆಯನ್ನು ಯಾವ ರೀತಿಯಲ್ಲಿ ಬಗೆಹರಿಸಬೇಕು ಮತ್ತು ಲೋಡ್ ಶೆಡ್ಡಿಂಗ್ ಸಮಸ್ಯೆ ಯನ್ನು
ಎದುರಿಸುವ ಬಗೆ ಹೇಗೆ ಎಂಬ ಕುರಿತು ಇಂಧನ ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ಕಲ್ಲಿದ್ದಲು ಕೊರತೆಯಿಂದಾಗಿ ಬಳ್ಳಾರಿ ಮತ್ತು ಯರಮರಸ್‌ನಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. ಈ ಬಗ್ಗೆ ಕೇಂದ್ರದ ಗಮನ ಸೆಳೆಯಲು ಹಲವು ಬಾರಿ ಪತ್ರ ಬರೆದಿದ್ದೇನೆ. ಎರಡು ತಿಂಗಳಿನಿಂದ ಮನವಿ ಮಾಡಿದರೂ ರಾಜ್ಯಕ್ಕೆ ಕಲ್ಲಿದ್ದಲು ನೀಡುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ.

ಕೇಂದ್ರ ಸರ್ಕಾರದಿಂದ ಬರಬೇಕಾದ ಕಲ್ಲಿದ್ದಲು ಬಂದಿಲ್ಲ ಎಂದು ಆರೋಪಿಸಿದರು. ಕಲ್ಲಿದ್ದಲು ಸಮಸ್ಯೆ ಕುರಿತು ಸೋಮವಾರ ಸಭೆ ನಡೆಸಿ ಚರ್ಚಿಸಲಾಗಿದೆ. ಬುಧವಾರವೂ ಸಭೆ ನಡೆಸಿ ಲೋಡ್‌ಶೆಡ್ಡಿಂಗ್ ಆಗದಂತೆ ಯಾವ ರೀತಿ ಕ್ರಮ ಕೈಗೊಳ್ಳಬೇಕು ಎಂಬು ದರ ಬಗ್ಗೆ ಸಮಾಲೋಚನೆ ನಡೆಸಲಾಗುವುದು. ಈಗಾಗಲೇ ಸಮಸ್ಯೆ ಕುರಿತು ಗಮನಹರಿಸಿ ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತಿದೆ. ಕೇಂದ್ರದ ಕೆಲವು ತೀರ್ಮಾನದ ಪರಿಣಾಮ ಕಲ್ಲಿದ್ದಲು ಸರಬರಾಜು ಸಮರ್ಪಕವಾಗಿ ಆಗುತ್ತಿಲ್ಲ.

ಅಲ್ಲದೇ, ಕೆಲವು ರಾಜ್ಯ ದಿಂದಲೂ ಕಲ್ಲಿದ್ದಲು ಆಮದು ಮಾಡಿಕೊಳ್ಳಲಾಗು ತ್ತಿತ್ತು. ಇದರ ಜತೆಗೆ ಆ ರಾಜ್ಯಗಳಲ್ಲಿ ಚುನಾವಣೆ ಪ್ರಕ್ರಿಯೆ ಆರಂಭಗೊಂಡಿರುವ ಹಿನ್ನೆಲೆಯಲ್ಲಿ ಕಲ್ಲಿದ್ದಲು ಸರಬರಾಜು ಆಗದ ಕಾರಣ
ನಮ್ಮ ರಾಜ್ಯದಲ್ಲಿ ಕೊರತೆ ಕಾಣುತ್ತಿದ್ದೇವೆ ಎಂದು ತಿಳಿಸಿದರು.

Follow Us:
Download App:
  • android
  • ios