ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಸಿಎಂ ಜೊತೆ ಚರ್ಚೆ ನಡೆಸುತ್ತೇನೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ.  ಹೆಲಿಕಾಪ್ಟರ್​ ಬಳಕೆಗೆ ಅನುಮತಿ ಇತ್ತ ಎಂಬ ಬಗ್ಗೆ ತನಿಖೆಯೂ ತನಿಖೆ ನಡೆಸಲಾಗುವುದು ಎಂದು ಗೃಹಮಂ ಹೇಳಿದ್ದಾರೆ.

ಬೆಂಗಳೂರು (ನ.09): ಮಾಸ್ತಿಗುಡಿ ಚಿತ್ರದ ಕ್ಲೈಮ್ಯಾಕ್ಸ್ ಚಿತ್ರೀಕರಣ ವೇಳೆ ದುರಂತ ನಡೆದಿದ್ದು ವಿಷಾದನೀಯ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.

ಮುನ್ನೆಚ್ಚರಿಕೆ ತೆಗೆದುಕೊಂಡಿದ್ದರೆ ಈ ಘಟನೆ ನಡೆಯುತ್ತಿರಲಿಲ್ಲ. ಸದ್ಯಕ್ಕೆ ಕಲಾವಿದ ಉದಯ್ ಮೃತದೇಹ ಸಿಕ್ಕಿದೆ. ಅನಿಲ್ ಶವಕ್ಕಾಗಿ ಶೋಧಕಾರ್ಯ ಮುಂದುವರಿದಿದೆ. ಶೂಟಿಂಗ್ ವೇಳೆ ಮುನ್ನೆಚ್ಚರಿಕೆ ಕ್ರಮಕ್ಕೆ ಸರ್ಕಾರದಿಂದ ಕೆಲವು ನಿಯಮಗಳನ್ನು ರಚಿಸಲು ನಿರ್ಧಾರಿಸಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

ಕುಟುಂಬಕ್ಕೆ ಪರಿಹಾರ ನೀಡುವ ಕುರಿತು ಸಿಎಂ ಜೊತೆ ಚರ್ಚೆ ನಡೆಸುತ್ತೇನೆ. ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ. ಹೆಲಿಕಾಪ್ಟರ್​ ಬಳಕೆಗೆ ಅನುಮತಿ ಇತ್ತ ಎಂಬ ಬಗ್ಗೆ ತನಿಖೆಯೂ ತನಿಖೆ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.