ಸಂಕಷ್ಟದಲ್ಲಿರುವ ಬ್ಯಾಂಕ್‌ಗಳ ನೆರವಿಗೆ ಧಾವಿಸಿರುವ ಕೇಂದ್ರಸರ್ಕಾರ, 20 ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ 88 ಸಾವಿರ ಕೋಟಿ ರು. ಬಂಡವಾಳ ಒದಗಿಸಲು ನಿರ್ಧರಿಸಿದೆ.

ನವದೆಹಲಿ: ಸಂಕಷ್ಟದಲ್ಲಿರುವ ಬ್ಯಾಂಕ್‌ಗಳ ನೆರವಿಗೆ ಧಾವಿಸಿರುವ ಕೇಂದ್ರಸರ್ಕಾರ, 20 ಸಾರ್ವಜನಿಕ ವಲಯದ ಬ್ಯಾಂಕ್‌ಗಳಿಗೆ 88 ಸಾವಿರ ಕೋಟಿ ರು. ಬಂಡವಾಳ ಒದಗಿಸಲು ನಿರ್ಧರಿಸಿದೆ. ‘ಒಟ್ಟು 88,139 ಕೋಟಿ ರು.ಗಳನ್ನು ಸರ್ಕಾರಿ ಬ್ಯಾಂಕ್‌ಗಳಿಗೆ ಒದಗಿಸಲು ನಿರ್ಧರಿಸಲಾಗಿದೆ’ ಎಂದು ವಿತ್ತ ಸಚಿವ ಅರುಣ್ ಜೇಟ್ಲಿ ತಿಳಿಸಿದ್ದಾರೆ.

 ಕಳೆದ ಅಕ್ಟೋಬರ್‌ನಲ್ಲಿ ಸರ್ಕಾರವು ಬ್ಯಾಂಕ್‌ಗಳಿಗೆ 2017-18 ಹಾಗೂ 2018-19ರಲ್ಲಿ ಬಂಡವಾಳ ಒಟ್ಟು 2.1 ಲಕ್ಷ ಕೋಟಿ ರು. ಬಂಡವಾಳ ಹರಿಸಲು ನಿರ್ಧರಿಸಿತ್ತು. ಇದರ ಭಾಗವಾಗಿ ಈಗ 88 ಸಾವಿರ ಕೋಟಿ ರು. ಘೋಷಣೆ ಮಾಡಲಾಗಿದೆ.