ದಕ್ಷಿಣ ಭಾರತದ ರಾಜ್ಯಪಾಲರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.
ನವದೆಹಲಿ: ದಕ್ಷಿಣ ಭಾರತದ ರಾಜ್ಯಪಾಲರೊಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ.
ರಾಜ್ಯಪಾಲರೊಬ್ಬರು ತಮ್ಮೊಂದಿಗೆ ಲೈಂಗಿಕ ಸಂಪರ್ಕ ಹೊಂದುವಂತೆ ಪೀಡಿಸುತ್ತಿದ್ದಾರೆ ಎಂದು ರಾಜಭವನದ ಕೆಲವು ಮಹಿಳಾ ಸಿಬ್ಬಂದಿ ದೂರು ಸಲ್ಲಿಸಿದ್ದಾರೆ. ಈ ಕುರಿತು ಪರಿಶೀಲನೆ ನಡೆಯುತ್ತಿದೆ ಎಂದು ಸೋಮವಾರ ಕೆಲವು ಮಾಧ್ಯಮಗಳು ವರದಿ ಮಾಡಿದ್ದವು. ಆದರೆ, ರಾಜ್ಯಪಾಲರ ಹೆಸರು, ಅವರು ಯಾವ ರಾಜ್ಯದವರು ಎಂಬ ಯಾವ ಮಾಹಿತಿಯೂ ಬಹಿರಂಗವಾಗಿಲ್ಲ.
ಮಾಹಿತಿ ಇಲ್ಲ- ಕೇಂದ್ರ:
ಈ ನಡುವೆ, ಇಂತಹ ಬೆಳವಣಿಗೆಗಳ ಬಗ್ಗೆ ಯಾವುದೇ ಮಾಹಿತಿಯಿಲ್ಲ ಎಂದು ಕೇಂದ್ರ ಗೃಹ ಸಚಿವಾಲಯದ ವಕ್ತಾರರು ಸ್ಪಷ್ಟಪಡಿಸಿದ್ದಾರೆ. ಕಳೆದ ವರ್ಷ ಮೇಘಾಲಯ ರಾಜ್ಯಪಾಲ ಷಣ್ಮುಗನಾಥನ್ ವಿರುದ್ಧ ಇದೇ ರೀತಿಯ ಆರೋಪಗಳು ಕೇಳಿಬಂದು, ಅವರು ರಾಜೀನಾಮೆ ನೀಡಿದ್ದರು. ಆಂಧ್ರಪ್ರದೇಶ ರಾಜ್ಯಪಾಲರಾಗಿದ್ದ ಎನ್.ಡಿ. ತಿವಾರಿ ಮೇಲೂ ಇಂಥದ್ದೇ ಆರೋಪ ಕೇಳಿಬಂದಿತ್ತು.
