ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುಜರಾತ್'ನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ.
ರಾಜ್‌ಕೋಟ್(ಡಿ.09): ಗುಜರಾತ್'ನಲ್ಲಿ ನಡೆದ ಮೊದಲ ಹಂತದ ವಿಧಾನಸಭಾ ಚುನಾವಣೆಯಲ್ಲಿ ಶೇ.68 ರಷ್ಟು ಮತದಾನವಾಗಿದೆ. ಸೌರಾಷ್ಟ್ರ ಹಾಗೂ ದಕ್ಷಿಣ ಗುಜರಾತ್‌ನ 89 ಸ್ಥಾನಗಳಿಗೆ ಮತದಾನ ನಡೆದಿದ್ದು, ಬಹುತೇ ಶಾಂತಿಯುತವಾಗಿದೆ ಎಂದು ಚುನಾವಣಾ ಆಯುಕ್ತರು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯಪಾಲರಿಂದ ಮತದಾನ
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಅವರು ಗುಜರಾತ್'ನಲ್ಲಿ ನಡೆದ ಮೊದಲ ಹಂತದ ಚುನಾವಣೆಯಲ್ಲಿ ತಮ್ಮ ಹಕ್ಕು ಚಲಾಯಿಸಿದ್ದಾರೆ. ತಮ್ಮ ಕ್ಷೇತ್ರ ರಾಜ್'ಕೋಟ್'ನ ಮತಗಟ್ಟೆಯಲ್ಲಿ ಮತದಾನ ಮಾಡಿದ್ದಾರೆ. ಡಿ.14ರಂದು ಎರಡನೇ ಹಂತದ ಮತದಾನ ನಡೆಯಲಿದ್ದು, ಡಿ.18ರಂದು ಫಲಿತಾಂಶ ಪ್ರಕಟವಾಗಲಿದೆ.
