ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ವಿಧಾನ ಮಂಡಲದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಿ ಎಂದು ಪ್ರಶ್ನಿಸಿ ವಾಪಸ್ ಕಳುಹಿಸಿದ್ದಾರೆ.
ಬೆಂಗಳೂರು(ಆ.22): ರಾಜ್ಯ ಸರ್ಕಾರ ಅಂಕಿತಕ್ಕೆ ಕಳುಹಿಸಿದ್ದ ಬಡ್ತಿ ಮೀಸಲಾತಿ ಸುಗ್ರೀವಾಜ್ಞೆ ಕಡತವನ್ನು ರಾಜ್ಯಪಾಲ ವಜುಭಾಯಿ ವಾಲಾ ವಾಪಸ್ ಕಳುಹಿಸಿದ್ದಾರೆ.
ಕೆಲವೊಂದು ಸ್ಪಷ್ಟನೆ ಕೇಳಿರುವ ರಾಜ್ಯಪಾಲರು ಬಡ್ತಿ ಮೀಸಲಾತಿಗೆ ಸುಗ್ರೀವಾಜ್ಣೆ ಅನಿವಾರ್ಯತೆ ಏನು? ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಸುಗ್ರೀವಾಜ್ಞೆ ಹೊರಡಿಸಬೇಕು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ವಿಧಾನ ಮಂಡಲದಲ್ಲಿ ಈ ಬಗ್ಗೆ ಗಂಭೀರವಾಗಿ ಚರ್ಚಿಸಲಿ ಎಂದು ಪ್ರಶ್ನಿಸಿ ವಾಪಸ್ ಕಳುಹಿಸಿದ್ದಾರೆ.
ಎಸ್ಸಿ ಎಸ್ಟಿ ಮೀಸಲಾತಿ ಮುಂದುವರಿಕೆಗೆ ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಮುಂದಾಗಿತ್ತು. ನಿನ್ನೆಯಷ್ಟೆ ಕೆಪಿಎಸ್'ಸಿ ಕಡತವನ್ನು ರಾಜ್ಯಪಾಲರು ವಾಪಸ್ ಕಳುಹಿಸಿದ್ದು, ಸತತ ಎರಡು ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆಯಾಗಿದೆ.
(ಸಾಂದರ್ಭಿಕ ಚಿತ್ರ)
--
