ಬೆಂಗಳೂರಿನಲ್ಲಿ ನಡೆದ ಮಾಜಿ ಕಾರ್ಪೋರೇಟರ್ ಗೋವಿಂದೇಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು  ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. 

ಬೆಂಗಳೂರು(ಡಿ.10): ಬೆಂಗಳೂರಿನಲ್ಲಿ ನಡೆದ ಮಾಜಿ ಕಾರ್ಪೋರೇಟರ್ ಗೋವಿಂದೇಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಶನಿವಾರ ಸಂಜೆ ಮಾಜಿ‌ ಬಿಬಿಎಂಪಿ ಸದಸ್ಯ ಗೋವಿಂದೇಗೌಡ ಅವರನ್ನು ದುಷ್ಕರ್ಮಿಗಳು ಸಮುದಾಯ‌ ಭವನಕ್ಕೆ ನುಗ್ಗಿ ಡ್ರ್ಯಾಗರ್ ನಿಂದ ಚುಚ್ಚಿ ಕೊಲೆ ಮಾಡಿದ್ದರು. 

ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಶಕ್ಕೆ ಪಡೆದಿರುವ ಮೂವರು ವ್ಯಕ್ತಿಗಳನ್ನು ಎಸಿಪಿ ಬಡಿಗೇರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆ ವೇಳೆ ಹತ್ಯೆ ಆರೋಪಿಗಳ ಮಾಹಿತಿ ಪಡೆದುಕೊಳ್ಳಲಾಗುತ್ತಿದೆ.

ನಿನ್ನೆ ಸಂಜೆ 4.30ರ ಸುಮಾರಿಗೆ ಹೆಗ್ಗನಹಳ್ಳಿ ಕಲ್ಯಾಣ ಮಂಟಪದ ಬಳಿ ಗೋವಿಂದೇ ಗೌಡ ಅವರ ಮೇಲೆ ದಾಳಿ ನಡೆಸಲಾಗಿತ್ತು. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಸುಂಕದ ಕಟ್ಟೆ ಬಳಿಯ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಗೋವಿಂದೇ ಗೌಡ ಅವರು ಮೃತಪಟ್ಟಿದ್ದರು. ಬಿಜೆಪಿ ಮುಖಂಡರೋರ್ವರ ಕೊಲೆ ಪ್ರಕರಣದಲ್ಲಿ ಬಂಧಿತರಾಗಿದ್ದ ಇವರು ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದರು.