ನವದೆಹಲಿ[ಡಿ.08]: ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌- ಹೈದರಾಬಾದ್‌ನ ಪ್ರಾಧ್ಯಾಪಕ ಕೃಷ್ಣಮೂರ್ತಿ ಸುಬ್ರಮಣಿಯನ್‌ ಅವರನ್ನು ಮುಖ್ಯ ಆರ್ಥಿಕ ಸಲಹೆಗಾರರನ್ನಾಗಿ ಕೇಂದ್ರ ಸರ್ಕಾರ ಶುಕ್ರವಾರ ನೇಮಿಸಿದೆ.

ಅರವಿಂದ ಸುಬ್ರಮಣಿಯನ್‌ ಅವರ ರಾಜೀನಾಮೆಯಿಂದ ಈ ಹುದ್ದೆ ತೆರವಾಗಿತ್ತು. ಸಂಪುಟದ ನೇಮಕಾತಿ ಸಮಿತಿ ಮುಖ್ಯ ಆರ್ಥಿಕ ಸಲಹೆಗಾರ ಹುದ್ದೆಗೆ ಕೃಷ್ಣಮೂರ್ತಿ ಸುಬ್ರಮಣಿಯನ್‌ ಅವರನ್ನು ನೇಮಿಸಿದ್ದು, ಮೂರು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ. ಮೂಲತಃ ತಮಿಳುನಾಡಿನವರಾದ ಸುಬ್ರಮಣಿಯನ್‌ ಅವರು ಸದ್ಯ ಇಂಡಿಯನ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌ನಲ್ಲಿ ಹಣಕಾಸು ವಿಷಯದ ಸಹ ಪ್ರಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಇದನ್ನೂ ಓದಿ: ಮೋದಿಗೆ ಹೊಸ ಸಲಹೆಗಾರ: ಆಗ್ತಾರಾ ಆರ್ಥಿಕತೆಯ ಹರಿಕಾರ?

ಶಿಕಾಗೋ ಬೂತ್‌ ಸ್ಕೂಲ್‌ ಆಫ್‌ ಬ್ಯುಸಿನೆಸ್‌ನಲ್ಲಿ ಸುಬ್ರಮಣಿಯನ್‌ ಅವರು ಪಿಎಚ್‌ಡಿ ಪೂರೈಸಿದ್ದಾರೆ. ಐಐಟಿ- ಐಐಎಂನ ಅಗ್ರ ಶ್ರೇಯಾಂಕಿತ ಹಳೆಯ ವಿದ್ಯಾರ್ಥಿಯಾಗಿರುವ ಸುಬ್ರಮಣಿಯನ್‌ ಅವರು ಬ್ಯಾಂಕಿಂಗ್‌, ಕಾರ್ಪೊರೇಟ್‌ ಆಡಳಿತದಲ್ಲಿ ಪರಿಣತಿ ಹೊಂದಿದ್ದಾರೆ.