ಅನುಭವ ಮಂಟಪದ ಮರು ನಿರ್ಮಾಣದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಮಾಡಿದ್ದ ಡಾ. ಗೋ.ರು. ಚನ್ನಬಸಪ್ಪ ನೇತೃತ್ವದ ತಜ್ಞರ ಸಲಹಾ ಸಮಿತಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ವರದಿಯನ್ನು ಸಲ್ಲಿಸಿದೆ.

ಬೆಂಗಳೂರು: ಅನುಭವ ಮಂಟಪದ ಮರು ನಿರ್ಮಾಣದ ಹಿನ್ನೆಲೆಯಲ್ಲಿ ಸರ್ಕಾರ ರಚನೆ ಮಾಡಿದ್ದ ಡಾ. ಗೋ.ರು. ಚನ್ನಬಸಪ್ಪ ನೇತೃತ್ವದ ತಜ್ಞರ ಸಲಹಾ ಸಮಿತಿಯು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಂದು ವರದಿಯನ್ನು ಸಲ್ಲಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವರದಿ ಸ್ವೀಕರಿಸಿ ಮಾತನಾಡಿದ ಮುಖ್ಯಮಂತ್ರಿಯವರು, ಅನುಭವ ಮಂಟಪದ ಮರು ನಿರ್ಮಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದ್ದಾರೆ.

ತಜ್ಞರ ಸಮಿತಿ ರಚಿಸುವ ನಿರ್ಣಯವನ್ನು ಬಸವ ಕಲ್ಯಾಣ ಅಭಿವೃದ್ಧಿ ಮಂಡಳಿ ಸಭೆಯಲ್ಲಿ ಕೈಗೊಳ್ಳಲಾಗಿತ್ತು.

ಈಗ ಸಮಿತಿ ನೀಡಿರುವ ವರದಿಯನ್ನು ಸರ್ಕಾರ ಪರಿಶೀಲಿಸಿ, ಮಂಡಳಿ ಸಭೆಯಲ್ಲಿ ಚರ್ಚಿಸಿ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಹನ್ನೆರಡನೇ ಶತಮಾನದಲ್ಲಿ ನಡೆದ ಸಮಾಜೋ-ಧಾರ್ಮಿಕ ದೋಲನದ ಸ್ಮರಣೆಯಾಗಿ ಬಸವ ಕಲ್ಯಾಣದಲ್ಲಿ ಉಳಿದುಕೊಂಡಿರುವ ಶರಣರ ಕೇಂದ್ರಗಳ ಜೀರ್ಣೋದ್ಧಾರ ಕಾರ್ಯ ನಡೆದಿದೆ. ಎಲ್ಲ ಆಂದೋಲನಗಳಿಗೆ ಕೇಂದ್ರಬಿಂದುವಾಗಿದ್ದ ಅನುಭವ ಮಟಂಪದ ಮರು ನಿರ್ಮಾಣಕ್ಕೂ ಇದೀಗ ಸರ್ಕಾರ ಮುಂದಾಗಿದೆ.