ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದರಿಗೆ ಕೊಕ್ ನೀಡಲಾಗಿದೆ. ​​ ಬಿಜೆಪಿ ಸಂಸದರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಸೇರಿಸದಂತೆ ಸಿಎಂ ಎಲ್ಲಾ  ಜಿಲ್ಲಾಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ. ಟಿಪ್ಪು ಜಯಂತಿ ವಿರೋಧಿಸಿದ್ದ ಬಿಜೆಪಿ ಸಂಸದರ ಹೆಸರು ಕೈಬಿಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಬೆಂಗಳೂರು (ನ.07): ಟಿಪ್ಪು ಜಯಂತಿ ಕಾರ್ಯಕ್ರಮದಲ್ಲಿ ಬಿಜೆಪಿ ಸಂಸದರಿಗೆ ಕೊಕ್ ನೀಡಲಾಗಿದೆ. ​​ ಬಿಜೆಪಿ ಸಂಸದರ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಸೇರಿಸದಂತೆ ಸಿಎಂ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಮೌಖಿಕ ಆದೇಶ ನೀಡಿದ್ದಾರೆ. ಟಿಪ್ಪು ಜಯಂತಿ ವಿರೋಧಿಸಿದ್ದ ಬಿಜೆಪಿ ಸಂಸದರ ಹೆಸರು ಕೈಬಿಡಲು ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೇಂದ್ರ ಸಚಿವ ಅನಂತಕುಮಾರ ಹೆಗಡೆ, ಶೋಭಾ ಕರಂದ್ಲಾಜೆ ಸೇರಿ ಹಲವು ಸಂಸದರ ಹೆಸರು ಕೈಬಿಡಲು ನಿರ್ಧರಿಸಲಾಗಿದೆ.

ವಿಧಾನಸೌಧದಲ್ಲಿಂದು ನಡೆದ ಜಿಲ್ಲಾಧಿಕಾರಿಗಳ ಸಭೆಯಲ್ಲಿ ಸಿಎಂ ಮೌಖಿಕ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳಿಗೆ ಪತ್ರದ ಮೂಲಕ ಸೂಚಿಸಿರುವ ಸಂಸದರ ಹೆಸರು ಕೈಬಿಡಲು ಸೂಚನೆ ನೀಡಲಾಗಿದೆ. ರಾಜ್ಯ ಶಿಷ್ಟಾಚಾರ ಅಧೀನ ಕಾರ್ಯದರ್ಶಿ ಡಿ.ಎಸ್. ಮಂಜುನಾಥಸ್ವಾಮಿ ಆದೇಶ ಹೊರಡಿಸಿದ್ದಾರೆ. ರಾಜ್ಯ ಸರ್ಕಾರದ ಸುತ್ತೋಲೆ ಸುವರ್ಣ ನ್ಯೂಸ್'ಗೆ ಲಭ್ಯವಾಗಿದೆ.