ಬೆಂಗಳೂರು (ಅ.13): ಬೆಂಗಳೂರಿನ ಬಸವೇಶ್ವರ ವೃತ್ತದಿಂದ ಹೆಬ್ಬಾಳವರೆಗೆ ಸ್ಟೀಲ್‌ಬ್ರಿಡ್ಜ್ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಆದರೆ ಈ ಯೋಜನೆಗೆ ನಗರದ ಶೇ.೭೩ರಷ್ಟು ಜನರು ವಿರೋಧ ವ್ಯಕ್ತಪಡಿಸಿದ್ದು, ಸರ್ಕಾರ ಆತುರದ ನಿರ್ಧಾರ ತೆಗೆದುಕೊಳ್ಳಬಾರದು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಗರದ ಮೂಲ ಸೌಲಭ್ಯದ ಅಭಿವೃದ್ಧಿಯಾಗಬೇಕು. ಆದರೆ ಆತುರ ಮಾಡಬಾರದು. ಸಾರ್ವಜನಿಕರ ಅಭಿಪ್ರಾಯ ಪಡೆದು ಇಂತಹ ಕಾಮಗಾರಿ ಮುನ್ನಡೆಸಬೇಕು ಎಂದು ಸಲಹೆ ಮಾಡಿದರು.

ಸ್ಟೀಲ್ ಬ್ರಿಡ್ಜ್ ಕಾಮಗಾರಿಗಾಗಿ ಆರಂಭದಲ್ಲಿ ೧,೩೯೯ ಕೋಟಿ ರೂ. ಅಂದಾಜು ವೆಚ್ಚ ಮಾಡಲಾಗಿತ್ತು. ಆದರೆ ಇದಾದ ನಂತರ ಕಬ್ಬಿಣದ ಬೆಲೆ ಕುಸಿತ ಕಂಡಿದೆ. ಆದರೂ ಸಹ ಇದೀಗ ಈ ಕಾಮಗಾರಿಯ ಮೊತ್ತ ೧,೮೯೯ ಕೋಟಿ ರೂ.ಗೆ ಏರಿಕೆಯಾಗಿದೆ. ಇದು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ ಎಂದ ಅವರು, ಇಂತಹ ವಿಚಾರದಲ್ಲಿ ಸರ್ಕಾರ ಪಾರದರ್ಶಕವಾಗಿರಬೇಕು ಎಂದು ಹೇಳಿದರು.