. ಡಿ.ದೇವರಾಜ ಅರಸು ಅವರ ಸಂಪುಟದಲ್ಲಿ ಸಚಿವರಾಗಿದ್ದ ಆರ್.ಡಿ.ಕಿತ್ತೂರ ಅವರ ಅಕೃತ ನಿವಾಸದಿಂದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕಾಗಿ ಕಿತ್ತೂರ ರಾಜಿನಾಮೆ ನೀಡಿದ್ದರು.
ರಾಜ್ಯ ರಾಜಕಾರಣದ ಇತಿಹಾಸದಲ್ಲಿ ಲೈಂಗಿಕ ಹಗರಣ, ಮಹಿಳೆಯರಿಗೆ ಕಿರುಕುಳ ಹಾಗೂ ಆಶ್ಲೀಲ ವರ್ತನೆ ಕಾರಣಗಳಿಗಾಗಿ ಹಿಂದಿನ ಸರ್ಕಾರಗಳು ಹಲವಾರು ಸಲ ಪೇಚಿಗೆ ಸಿಲುಕಿದ ಪ್ರಸಂಗಗಳು ನಡೆದಿವೆ. ಡಿ.ದೇವರಾಜ ಅರಸು ಅವರ ಸಂಪುಟದಲ್ಲಿ ಸಚಿವರಾಗಿದ್ದ ಆರ್.ಡಿ.ಕಿತ್ತೂರ ಅವರ ಅಕೃತ ನಿವಾಸದಿಂದ ಮಹಿಳೆಯೊಬ್ಬರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕಾಗಿ ಕಿತ್ತೂರ ರಾಜಿನಾಮೆ ನೀಡಿದ್ದರು. ಈ ವೇಳೆ ತೀವ್ರ ಮುಜುಗರಕ್ಕೆ ಒಳಗಾಗಿದ್ದ ಮುಖ್ಯಮಂತ್ರಿ ಅರಸು ಅವರು ಕಿತ್ತೂರ ರಾಜಿನಾಮೆ ಪಡೆದಿದ್ದರು. ಕೆಪಿಸಿಸಿ ಅಧ್ಯಕ್ಷರಾಗಿದ್ದ ವಿ.ಎಸ್.ಕೌಜಲಗಿ ಅವರ ಟೇಪ್ ಹಗರಣವೂ ರಾಜ್ಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿತ್ತು. ಮಹಿಳೆಯೊಬ್ಬರೊಂದಿಗೆ ಲೈಂಗಿಕ ಚಟುವಟಿಕೆ ನಡೆಸಿದ ಟೇಪ್ ಇದೆ ಎಂಬ ವದಂತಿ ಹರಡಿ, ಕೊನೆಗೆ ಕೌಜಲಗಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು. ಬಿ.ಎಸ್.ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದ ಹರತಾಳು ಹಾಲಪ್ಪ ಅವರು ತಮ್ಮ ಸ್ನೇಹಿತನ ಪತ್ನಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂಬ ಕಾರಣಕ್ಕೆ ಸಚಿವ ಸ್ಥಾನ ಕಳೆದುಕೊಂಡಿದ್ದರು. ಅದೇ ಸರ್ಕಾರದಲ್ಲಿ ಸಚಿವರಾಗಿದ್ದ ಸಿ.ಸಿ.ಪಾಟೀಲ್, ಲಕ್ಷ್ಮಣ ಸವದಿ ಹಾಗೂ ಕೃಷ್ಣ ಪಾಲೇಮಾರ್ ಅವರು ವಿಧಾನಸಭೆಯಲ್ಲಿ ಅಶ್ಲೀಲ ವಿಡಿಯೋ ನೋಡಿದ್ದ ಕಾರಣಕ್ಕಾಗಿ ಪಾಟೀಲ್ ಮತ್ತು ಸವದಿ ಸಚಿವ ಸ್ಥಾನ ಕಳೆದುಕೊಂಡಿದ್ದರು.
