ನಿವೇಶನ, ಫ್ಲ್ಯಾಟ್ ಖರೀದಿಸುವವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಿಯಲ್ ಎಸ್ಟೇಟ್‌ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ ರೇರಾ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.

ಬೆಂಗಳೂರು(ಜು.28): ನಿವೇಶನ, ಫ್ಲ್ಯಾಟ್ ಖರೀದಿಸುವವರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಿಯಲ್ ಎಸ್ಟೇಟ್‌ ನಿಯಂತ್ರಣ ಮತ್ತು ಅಭಿವೃದ್ಧಿ ಕಾಯ್ದೆ ರೇರಾ ಜಾರಿಗೊಳಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ನೀಡಿದೆ.

ರೇರಾ ಕಾಯ್ದೆ ಜಾರಿಯಿಂದ ರಿಯಲ್‌ ಎಸ್ಟೇಟ್‌ ಹೆಸರಿನಲ್ಲಿ ನಡೆಯುತ್ತಿರುವ ವಂಚನೆ, ಲೂಟಿಗೆ ಕಡಿವಾಣ ಬೀಳಲಿದೆ. ಐಎಎಸ್ ಅಧಿಕಾರಿ ವಿನೋತ್ ಪ್ರಿಯಾ ಅವರನ್ನು ರೇರಾ ಕಾಯ್ದೆ ಪ್ರಾಧಿಕಾರದ ಕಾರ್ಯದರ್ಶಿಯಾಗಿ ಸರ್ಕಾರ ನೇಮಕಗೊಳಿಸಲು ಆದೇಶ ಹೊರಡಿಸಿದೆ.

ಇನ್ನು ರೇರಾ ವೆಬ್​ ಪೋರ್ಟಲ್ ಆರಂಭಿಸಲಾಗಿದ್ದು, ಈ ವೆಬ್​ ಪೋರ್ಟಲ್​'ನಲ್ಲಿ ರೇರಾ ಯೋಜನೆಗಳು,ನಿವೇಶನ ನೋಂದಣಿ, ಎಸ್ಟೇಟ್ ಏಜೆಂಟರ್ ಬಗ್ಗೆ ದೂರು ಸಲ್ಲಿಸಲು ಅವಕಾಶವಿದೆ.