ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 5351.49 ಕೋಟಿ ರು.ಗಳ ಪ್ರಸಕ್ತ 2017-18ನೇ ಸಾಲಿನ ಮೂರನೇ ಹಾಗೂ ಅಂತಿಮ ಕಂತಿನ ಪೂರಕ ಅಂದಾಜುಗಳನ್ನು ಮಂಡಿಸಿದ್ದಾರೆ.
ವಿಧಾನಸಭೆ: ಹಣಕಾಸು ಇಲಾಖೆಯ ಹೊಣೆ ಹೊತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಟ್ಟು 5351.49 ಕೋಟಿ ರು.ಗಳ ಪ್ರಸಕ್ತ 2017-18ನೇ ಸಾಲಿನ ಮೂರನೇ ಹಾಗೂ ಅಂತಿಮ ಕಂತಿನ ಪೂರಕ ಅಂದಾಜುಗಳನ್ನು ಮಂಡಿಸಿದ್ದಾರೆ.
ಈ ಪೂರಕ ಅಂದಾಜುಗಳಲ್ಲಿ ವಿಧಾನಸಭಾ ಚುನಾವಣೆಯ ಗುಪ್ತ ಮಾಹಿತಿ ಸಂಗ್ರಹಿಸುವ ಸಲುವಾಗಿ ಗೃಹ ಇಲಾಖೆಗೆ 10 ಕೋಟಿ ರು.ಗಳನ್ನು ನಿಗದಿಪಡಿಸಿರುವುದು ಕುತೂಹಲಕರವಾಗಿದೆ. ‘2018ನೇ ಸಾಲಿನ ವಿಧಾನಸಭಾ ಚುನಾವಣೆಯ ವಿಧಾನಸಭಾ ಸಲುವಾಗಿ ಗುಪ್ತ ಮಾಹಿತಿ ಸಂಗ್ರಹಿಸುವ ಸಲುವಾಗಿ 10 ಕೋಟಿ ರು.ಗಳನ್ನು ಹೆಚ್ಚುವರಿಯಾಗಿ ಒದಗಿಸಿದೆ’ ಎಂದು ಪ್ರಸ್ತಾಪಿಸಲಾಗಿದೆ.
ಅಲ್ಲದೆ, ವಿಧಾನಸಭಾ ಚುನಾವಣೆಯ ಪ್ರಯಾಣ ವೆಚ್ಚ ಭರಿಸಲು ಎಂಟು ಕೋಟಿ ರು.ಗಳನ್ನು ಹೆಚ್ಚುವರಿಯಾಗಿ ನೀಡಲಾಗಿದೆ. ಅಲ್ಲದೆ, ಕಳೆದ ವರ್ಷ ಬೆಳಗಾವಿಯಲ್ಲಿ ನಡೆದ ಅಧಿವೇಶನಕ್ಕೆ ಸಂಬಂಧಿಸಿದಂತೆ ಪೊಲೀಸ್ ಬಂದೋಬಸ್ತ್ ಮತ್ತಿತರ ವೆಚ್ಚಗಳ ಸಲುವಾಗಿ 4.26 ಕೋಟಿ ರು. ಅನುದಾನ ಒದಗಿಸಲಾಗಿದೆ.ಎಸ್ಸಿ, ಎಸ್ಟಿ ವಿದ್ಯಾರ್ಥಿಗಳಿಗೆ ಉಚಿತ ಬಸ್‌ಪಾಸ್ ವಿಚರಿಸಿದ ವೆಚ್ಚದ ಬಾಬ್ತನ್ನೂ ಈ ಪೂರಕ ಅಂದಾಜಿನಲ್ಲಿ ಭರಿಸಲಾಗಿದೆ.
