ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಶಾಕ್​ ಕೊಡಲು ರಾಜ್ಯ ಸರ್ಕಾರ ರೆಡಿಯಾಗಿದೆ. ಸರ್ಕಾರದ ವಿರುದ್ಧ ಸಮರ ಸಾರಿರುವ ಮಾಜಿ ಸಿಎಂ ಯಡಿಯೂರಪ್ಪಗೆ ತಿರುಗೇಟು ಕೊಡಲು ಶೋಭಾ ಅಸ್ತ್ರ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದಂತಿದೆ. ಯಾಕಂದ್ರೆ, ಶೋಭಾ ಕರಂದ್ಲಾಜೆ ಇಂಧನ ಸಚಿವೆಯಾಗಿದ್ದಾಗ ನಡೆದಿದೆ ಎನ್ನಲಾದ 28 ಸಾವಿರ ಕೋಟಿ ರೂ. ವಿದ್ಯುತ್​ ಹಗರಣದ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ರಚಿಸಿದ್ದ ಸದನ ಸಮಿತಿ ಇಂದು ತನ್ನ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಬೆಂಗಳೂರು(ಅ.30): ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆಗೆ ಶಾಕ್​ ಕೊಡಲು ರಾಜ್ಯ ಸರ್ಕಾರ ರೆಡಿಯಾಗಿದೆ. ಸರ್ಕಾರದ ವಿರುದ್ಧ ಸಮರ ಸಾರಿರುವ ಮಾಜಿ ಸಿಎಂ ಯಡಿಯೂರಪ್ಪಗೆ ತಿರುಗೇಟು ಕೊಡಲು ಶೋಭಾ ಅಸ್ತ್ರ ಬಳಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿದಂತಿದೆ. ಯಾಕಂದ್ರೆ, ಶೋಭಾ ಕರಂದ್ಲಾಜೆ ಇಂಧನ ಸಚಿವೆಯಾಗಿದ್ದಾಗ ನಡೆದಿದೆ ಎನ್ನಲಾದ 28 ಸಾವಿರ ಕೋಟಿ ರೂ. ವಿದ್ಯುತ್​ ಹಗರಣದ ಆರೋಪದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ರಚಿಸಿದ್ದ ಸದನ ಸಮಿತಿ ಇಂದು ತನ್ನ ವರದಿ ಸಲ್ಲಿಸುವ ಸಾಧ್ಯತೆ ಇದೆ.

ಇಂದು ಮಧ್ಯಾಹ್ನ 3 ಗಂಟೆಗೆ ವಿಧಾನಸೌಧದಲ್ಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್​ ಅಧ್ಯಕ್ಷತೆಯಲ್ಲಿ ಕೊನೆಯ ಸಭೆ ನಡೆಯಲಿದೆ. ಸಮಿತಿಯ ವರದಿ ಬಹುತೇಕ ಸಿದ್ಧಗೊಂಡಿದೆ. ಮತ್ತೊಮ್ಮೆ ವರದಿ ಬಗ್ಗೆ ಚರ್ಚೆ ನಡೆದು ಅಂತಿಮಗೊಳಿಸಿದ ನಂತರ ಸ್ಪೀಕರ್​​ಗೆ ಸಲ್ಲಿಸುವ ಸಾಧ್ಯತೆ ಇದೆ. ಈಗಾಗಲೇ ವಿದ್ಯುತ್​ ಖರೀದಿ ವಿಚಾರ ಕಾಂಗ್ರೆಸ್​ ಹಾಗೂ ಬಿಜೆಪಿ ಮಧ್ಯೆ ತಿಕ್ಕಾಟಕ್ಕೆ ಕಾರಣವಾಗಿದೆ.

ಈ ವರದಿ ಸಲ್ಲಿಕೆಯಾದ ಬಳಿಕ ಮತ್ತಷ್ಟು ರಾಜಕೀಯ ಜೋರಾಗಲಿದೆ. ಮಾಜಿ ಸಿಎಂ ಯಡಿಯೂರಪ್ಪ, ಹಾಲಿ ಇಂಧನ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಗಂಭೀರ ಆರೋಪ ಮಾಡಿದ ಬೆನ್ನಲ್ಲೇ ಶೋಭಾ ಅವಧಿಯ ವಿದ್ಯುತ್​ ಖರೀದಿ ಅಕ್ರಮ ಪ್ರಸ್ತಾಪಿಸಿದ್ರು. ಅಲ್ಲದೇ ಇದಕ್ಕೆ ಸಂಬಂಧಿಸಿದಂತೆ ಸಚಿವ ಡಿಕೆಶಿ, ತಮ್ಮ ಬದ್ಧ ರಾಜಕೀಯ ವೈರಿ ಕುಮಾರಸ್ವಾಮಿ ನಿವಾಸಕ್ಕೆ ತೆರಳಿ ಸದನ ಸಮಿತಿ ವರದಿ ಸಂಬಂಧ ಮನವೊಲಿಸಿದ್ರು..