ಅ.28ರಂದು ಪೂರ್ವಭಾವಿ ಸಭೆ ನಡೆಯಲಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಂದ ಆಹ್ವಾನ ನೀಡಲಾಗಿದೆ.

ಬೆಂಗಳೂರು(ಅ.26): ಬಿಜೆಪಿ ಪ್ರಬಲ ವಿರೋಧದ ನಡುವೆಯೂ ನವೆಂಬರ್​ 10ರಂದು ಹಜರತ್ ಟಿಪ್ಪು ಜಯಂತಿ ಆಚರಣೆಗೆ ಸರ್ಕಾರ ಆದೇಶ ನೀಡಿದೆ. ನವೆಂಬರ್​ 10ರಂದು ಬೆಳಗ್ಗೆ 11ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ ಟಿಪ್ಪು ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆದೇಶ ಪ್ರಕಟವಾಗಿದೆ. ಕಾರ್ಯಕ್ರಮದ ರೂಪುರೇಷಗಳ ಸಿದ್ದಪಡಿಸುವುದಕ್ಕಾಗಿ ಅ.28ರಂದು ಪೂರ್ವಭಾವಿ ಸಭೆ ನಡೆಯಲಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಕಾರ್ಯದರ್ಶಿಗೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಿಂದ ಆಹ್ವಾನ ನೀಡಲಾಗಿದೆ.