ಚುನಾವಣೆಗೆ ಮುನ್ನ ಅಧಿಕಾರಿಗಳ ವರ್ಗಕ್ಕೆ ಸರ್ಕಾರದ ಹುನ್ನಾರ ..!

Govt Plan To Transfer IAS And IPS Officers Before Election
Highlights

ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ಆಡಳಿತ ಯಂತ್ರಕ್ಕೆ ಬೃಹತ್ ಸರ್ಜರಿಯನ್ನು ನಡೆಸಲು ರಾಜ್ಯ ಸರ್ಕಾರ ನಡೆಸಿದ್ದು, ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಯಕಟ್ಟಿನ ಜಾಗಕ್ಕೆ ತಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿರುವ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸಜ್ಜಾಗಿದೆ ಎಂಬ ಗಂಭೀರ ಆರೋಪ ಬಿಜೆಪಿ ವಲಯದಿಂದ ಕೇಳಿ ಬಂದಿದೆ.

ಬೆಂಗಳೂರು: ಬಜೆಟ್ ಅಧಿವೇಶನ ಮುಗಿಯುತ್ತಿದ್ದಂತೆಯೇ ರಾಜ್ಯ ಆಡಳಿತ ಯಂತ್ರಕ್ಕೆ ಬೃಹತ್ ಸರ್ಜರಿಯನ್ನು ನಡೆಸಲು ರಾಜ್ಯ ಸರ್ಕಾರ ನಡೆಸಿದ್ದು, ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಆಯಕಟ್ಟಿನ ಜಾಗಕ್ಕೆ ತಮ್ಮೊಂದಿಗೆ ಉತ್ತಮ ಸಂಬಂಧ ಹೊಂದಿರುವ ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ಸಜ್ಜಾಗಿದೆ ಎಂಬ ಗಂಭೀರ ಆರೋಪ ಬಿಜೆಪಿ ವಲಯದಿಂದ ಕೇಳಿ ಬಂದಿದೆ.

ರಾಜ್ಯ ವಿಧಾನಸಭಾ ಚುನಾವಣೆಗೆ ಮಾ. 7 ರಿಂದ ಮಾ. 18ರ ವೇಳೆಗೆ ವೇಳಾಪಟ್ಟಿ ಪ್ರಕಟಗೊಂಡು ನೀತಿ ಸಂಹಿತೆ ಜಾರಿಯಾಗುವ ಸುಳಿವು ಸರ್ಕಾರಕ್ಕೆ ದೊರಕಿದೆ. ಹೀಗಾಗಿಯೇ ಮಾರ್ಚ್ ಮೊದಲ ವಾರದ ನಂತರ ನಿಗದಿಯಾಗಿದ್ದ ಸರ್ಕಾರಿ ಕಾಮಗಾರಿಗಳು ವಿಶೇಷವಾಗಿ ಕಾಮಗಾರಿ ಉದ್ಘಾಟನಾ ಕಾರ್ಯಕ್ರಮಗಳನ್ನು ಫೆಬ್ರವರಿ ಮಾಸಾಂತ್ಯ ಹಾಗೂ ಮಾರ್ಚ್ ಮೊದಲ ವಾರದ ಆರಂಭದ ದಿನಗಳಿಗೆ ಮರು ನಿಗದಿ ಮಾಡಲಾಗಿದೆ.

loader