ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್‌) ಖಾತೆಗಳನ್ನು 15 ವರ್ಷಗಳ ಅವಧಿಗೆ ಮುನ್ನವೇ ಸಮಾಪ್ತಿಗೊಳಿಸುವುದಕ್ಕೆ ಅವಕಾಶ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ನವದೆಹಲಿ: ಸಾರ್ವಜನಿಕ ಭವಿಷ್ಯ ನಿಧಿ (ಪಿಪಿಎಫ್‌) ಖಾತೆಗಳನ್ನು 15 ವರ್ಷಗಳ ಅವಧಿಗೆ ಮುನ್ನವೇ ಸಮಾಪ್ತಿಗೊಳಿಸುವುದಕ್ಕೆ ಅವಕಾಶ ನೀಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಅಲ್ಲದೇ ಅಪ್ರಾಪ್ತ ವಯಸ್ಸಿನವರ ಹೆಸರಿನಲ್ಲಿ ಸಣ್ಣ ಉಳಿತಾಯ ಖಾತೆ ಆರಂಭಿಸಲು ಅವಕಾಶ ನೀಡಲಾಗುವುದು ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ಈ ಸಂಬಂಧ ಹಣಕಾಸು ಮಸೂದೆ 2018ರಲ್ಲಿ ಬದಲಾವಣೆ ಮಾಡಲು ಉದ್ದೇಶಿಸಲಾಗಿದೆ. ಈಗಿರುವ ಸೌಲಭ್ಯಗಳ ಜೊತೆಗೆ ಠೇವಣಿಗಳಿಗೆ ಹೊಸ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಸಣ್ಣ ಉಳಿತಾಯ ಯೋಜನೆಗಳ ನವ್ಯತೆ ಕಾಪಾಡಿಕೊಳ್ಳುವ ಸಲುವಾಗಿ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ.