ಬೆಂಗಳೂರು (ಸೆ.21): ಕಾವೇರಿ ವಿಚಾರದಲ್ಲಿ ರಾಜ್ಯದ ರೈತರ ಹಿತ ಕಾಯುವುದು ಜನ ಪ್ರತಿನಿಧಿಗಳಿಗೆ ಮುಖ್ಯವಾಗಬೇಕೇ ವಿನಃ ರಾಜಕಾರಣವಲ್ಲ ಎಂದು ಕೇಂದ್ರ ವಿರೋಧ ಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯ ಆ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಸರಿಯಾಗಿ ನಡೆದುಕೊಂಡಿದೆ.
ಬಿಜೆಪಿ ನಾಯಕರು ಯಾಕೆ ಬಂದಿಲ್ಲ ಎನ್ನುವುದು ಗೊತ್ತಿಲ್ಲ ಎಂದಿದ್ದಾರೆ.
ಸಂವಿಧಾನ ಪೀಠದ ಮುಂದೆ ಹೋಗೋದು, ರಾಷ್ಟ್ರಪತಿ ಮುಂದೆ ಹೋಗೋದು ಎಲ್ಲದರ ಬಗ್ಗೆ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗುತ್ತದೆ. ಅಂತಿಮವಾಗಿ ಸರ್ಕಾರ ರಾಜ್ಯದ ರೈತರ ಹಿತ ಕಾಯುತ್ತದೆ ಎಂದು ಖರ್ಗೆ ಹೇಳಿಕೆ ನೀಡಿದ್ದಾರೆ.
