ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಮುಚ್ಚಲಾಗುತ್ತದೆ ಎಂದು ಹರಿದಾಡುತ್ತಿರುವ ಸುದ್ದಿಗೆ ಆರ್’ಬಿಐ ಇಂದು ಸ್ಪಷ್ಟನೆ ನೀಡಿದ್ದು, ಬ್ಯಾಂಕುಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದೆ.
ನವದೆಹಲಿ (ಡಿ.22): ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಮುಚ್ಚಲಾಗುತ್ತದೆ ಎಂದು ಹರಿದಾಡುತ್ತಿರುವ ಸುದ್ದಿಗೆ ಆರ್’ಬಿಐ ಇಂದು ಸ್ಪಷ್ಟನೆ ನೀಡಿದ್ದು, ಬ್ಯಾಂಕುಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದೆ.
ಸರ್ಕಾರಿ ಸ್ವಾಮ್ಯದ ಸಹಕಾರಿ ಬ್ಯಾಂಕುಗಳ ಮೇಲೆ ಆರ್’ಬಿಐ ಸೂಕ್ತ ಕ್ರಮ (Prompt Corrective Action) ಕೈಗೊಳ್ಳುತ್ತದೆ ಎಂಬ ಸುದ್ದಿ ಕೇಳಿಬಂದಿತ್ತು.
ಇದು ಸುಳ್ಳು ಸುದ್ದಿ. ಕೆಲವು ಮಾಧ್ಯಮಗಳಲ್ಲಿ, ಸೋಷಿಯಲ್ ಮೀಡಿಯಾದಲ್ಲಿ ತಪ್ಪು ಮಾಹಿತಿ ಹರಿದಾಡಿದೆ. ಸಾರ್ವಜನಿಕ ವಲಯದ ಬ್ಯಾಂಕುಗಳನ್ನು ಮುಚ್ಚುವ ಪ್ರಶ್ನೆಯೇ ಇಲ್ಲ. ಈ ಬ್ಯಾಂಕುಗಳನ್ನು ಇನ್ನಷ್ಟು ಬಲವರ್ಧನೆ ಮಾಡಲು ಸರ್ಕಾರ 2.11 ಲಕ್ಷ ಕೋಟಿಯನ್ನು ಹೂಡಿಕೆ ಮಾಡುತ್ತಿದೆ. ವದಂತಿಗಳನ್ನು ನಂಬಬೇಡಿ ಎಂದು ಆರ್’ಬಿಐ ಸ್ಪಷ್ಟಪಡಿಸಿದೆ.
