ಕೈಯಲ್ಲಿ ಬಂದೂಕು ಹಿಡಿದುಕೊಂಡು ಓಡಾಡುವ ಪರಿಸ್ಥಿತಿಗೆ ರಾಜ್ಯ ಇನ್ನೂ ತಲುಪಲು ಸಾಧ್ಯವಿಲ್ಲ. ಯಾರೂ ಇಂತಹ ಕೆಲಸ ಮಾಡಿದ್ದಾರೋ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು- ಗೃಹ ಸಚಿವ ಡಾ.ಪರಮೇಶ್ವರ್
ಶಿವಮೊಗ್ಗ(ನ.02): ಕೈಯಲ್ಲಿ ಬಂದೂಕು ಹಿಡಿದುಕೊಂಡು ಓಡಾಡಿದವರ ವಿರುದ್ಧ ಕ್ರಮ ಖಚಿತ ಎಂದು ಗೃಹ ಸಚಿವ ಡಾ.ಪರಮೇಶ್ವರ್ ಹೇಳಿದರು.
ಬೆಳಗಾವಿಯಲ್ಲಿ ರಾಜ್ಯೋತ್ಸವದಂದು ಕರಾಳ ದಿನ ಆಚರಿಸಿದ್ದಕ್ಕೆ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದ ಅವರು, ಕೈಯಲ್ಲಿ ಬಂದೂಕು ಹಿಡಿದುಕೊಂಡು ಓಡಾಡುವ ಪರಿಸ್ಥಿತಿಗೆ ರಾಜ್ಯ ಇನ್ನೂ ತಲುಪಲು ಸಾಧ್ಯವಿಲ್ಲ. ಯಾರೂ ಇಂತಹ ಕೆಲಸ ಮಾಡಿದ್ದಾರೋ ಅವರ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.
ನ್ಯಾಯಾಲಯಗಳಲ್ಲಿ ಅಪರಾಧ ಸಾಬೀತು ಕುಂಠಿತ ಆಗುತ್ತಿರುವ ಹಿನ್ನೆಲೆಯಲ್ಲಿ ಅಭಿಯೋಜನೆ ಇಲಾಖೆ ನಿರ್ದೇಶಕರೊಂದಿಗೆ ಚರ್ಚಿಸಲಾಗಿದೆ. ಪ್ರತಿ ಪ್ರಕರಣಗಳನ್ನೂ ಗಂಭೀರವಾಗಿ ಪರಿಗಣಿಸಲು ಸೂಚಿಸಲಾಗಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು. ರಾಜ್ಯದಲ್ಲಿ ನಕ್ಸಲ್ ಚಟುವಟಿಕೆ ಸಂಪೂರ್ಣ ನಿಯಂತ್ರಣದಲ್ಲಿದೆ ಇದೇ ವೇಳೆ ಗೃಹ ಸಚಿವರು ಹೇಳಿದರು.
