ಬಳ್ಳಾರಿ ಜಿಲ್ಲೆಯನ್ನು ಇಬ್ಭಾಗಗೊಳಿಸಿ ನೂತನ ವಿಜಯನಗರ ಜಿಲ್ಲೆ ರೂಪಿಸುವ ಕೂಗಿಗೆ ವಿರೋಧ | ಉಪ ಚುನಾವಣೆ ಹಿನ್ನಲೆಯಲ್ಲಿ ಈ ವಿಚಾರವನ್ನು ತಾತ್ಕಾಲಿಕವಾಗಿ ಕೈ ಬಿಡಲಾಗಿದೆ. 

ಬೆಂಗಳೂರು (ಸೆ. 24): ಉಪಚುನಾವಣೆ ಘೋಷಣೆಯಾಗಿರುವ ಹಿನ್ನೆಲೆ ಯಲ್ಲಿ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರವನ್ನು ನೂತನ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ತೀರ್ಮಾನವನ್ನು ರಾಜ್ಯ ಸರ್ಕಾರವು ತಾತ್ಕಾಲಿಕವಾಗಿ ಕೈಬಿಟ್ಟಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಯಾವುದೇ ಕಾರಣಕ್ಕೂ ಜಿಲ್ಲೆ ಇಬ್ಭಾಗಕ್ಕೆ ಬಿಡೊಲ್ಲ: ಶ್ರೀರಾಮುಲು

ಅನರ್ಹಗೊಂಡಿರುವ ಶಾಸಕ ಆನಂದ್ ಸಿಂಗ್ ಅವರ ನೇತೃತ್ವದ ನಿಯೋಗ ವಿಜಯನಗರ ಜಿಲ್ಲೆ ಘೋಷಣೆ ಮಾಡುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿ ಯೂರಪ್ಪ ಅವರಿಗೆ ಕಳೆದ ವಾರ ಮನವಿ ಮಾಡಿತ್ತು. ಈ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಯಡಿಯೂರಪ್ಪ, ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಸಂಬಂಧಪಟ್ಟಂತಹ ಕಡತವನ್ನು ಮಂಡಿಸುವಂತೆ ಮುಖ್ಯಕಾರ್ಯದರ್ಶಿಗೆ ನಿರ್ದೇಶನ ನೀಡಿದ್ದರು.

ಸ್ವಾರ್ಥಿಗಳಿಂದ ಸ್ವಾರ್ಥಕ್ಕಾಗಿ ವಿಜಯನಗರ ಜಿಲ್ಲೆ: ಈಗ ಅಪಸ್ವರ ಬಿಜೆಪಿಯಲ್ಲೇ!

ಆದರೆ, ಉಪಚುನಾವಣೆ ಘೋಷಣೆಯಾಗಿರುವ ಕಾರಣಕ್ಕಾಗಿ ವಿಜಯನಗರವನ್ನು ಹೊಸ ಜಿಲ್ಲೆಯನ್ನಾಗಿ ಘೋಷಣೆ ಮಾಡುವ ನಿರ್ಧಾರವನ್ನು ತಾತ್ಕಾಲಿಕವಾಗಿ ಕೈಬಿಟ್ಟಿದೆ. ಉಪಚುನಾವಣೆ ಬಳಿಕ ಘೋಷಣೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.