ಗುತ್ತಿಗೆ ಪೌರಕಾರ್ಮಿಕರ ನೇಮಕಾತಿಯನ್ನು ಖಾಯಂ ಮಾಡಿ , ಆರೋಗ್ಯಸಂಜೀವಿನಿ ವ್ಯಾಪ್ತಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಆಂಜನೇಯ ಘೋಷಿಸಿದ್ದಾರೆ

ಬೆಂಗಳೂರು: ಕಳೆದ ಎರಡು ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ಪೌರಕಾರ್ಮಿಕರ ಹೋರಾಟಕ್ಕೆ ಕೊನೆಗೂ ರಾಜ್ಯ ಸರ್ಕಾರ ಮಣಿದಿದೆ.

ಗುತ್ತಿಗೆ ಪೌರಕಾರ್ಮಿಕರ ನೇಮಕಾತಿಯನ್ನು ಖಾಯಂ ಮಾಡಿ , ಆರೋಗ್ಯಸಂಜೀವಿನಿ ವ್ಯಾಪ್ತಿಗೆ ತರಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್ ಆಂಜನೇಯ ಘೋಷಿಸಿದ್ದಾರೆ

ಎಲ್ಲಾ ಗುತ್ತಿಗೆ ಪೌರ ಕಾರ್ಮಿಕರನ್ನು ಖಾಯಂಗೆ ಹಾಗೂ ಗುತ್ತಿಗೆ ಪದ್ಧತಿ ರದ್ದುಗೊಳಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆಯಲ್ಲದೇ, ಇನ್ಮುಂದೆ ಬಿಬಿಎಂಪಿಯೇ ನೇರವಾಗಿ ಕಾರ್ಮಿಕರ ಬ್ಯಾಂಕ್‌ ಖಾತೆಗೆ ವೇತನ ಜಮೆ ಮಾಡಲಿದೆ ಎಂದು ಸಮಾಜ ಕಲ್ಯಾಣ ಸಚಿವ ಆಂಜನೇಯ ಹೇಳಿದ್ದಾರೆ

ಜೊತೆಗೆ ಪೌರ ಕಾರ್ಮಿಕರಿಗೆ ಉಚಿತ ಚಿಕಿತ್ಸೆ ನೀಡುವ ಆರೋಗ್ಯ ಸಂಜೀವಿನಿ ಯೋಜನೆ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. 

ಮೃತ ಪೌರ ಕಾರ್ಮಿಕನ ಕುಟುಂಬಕ್ಕೆ ಅನುಕಂಪದ ಆಧಾರದಲ್ಲಿ ನೌಕರರಿ ಜೊತೆಗೆ ಮನೆ ಕಟ್ಟಿಸಿಕೊಳ್ಳಲು 4 ಲಕ್ಷ ಉಚಿತ ಧನ ಸಹಾಯ ನೀಡುವುದಾಗಿ ಸಚಿವ ಆಂಜನೇಯ ಹೇಳಿದ್ದಾರೆ.