ಬೆಂಗಳೂರಿನ ವಿಕ್ಟೋರಿಯಾ ಸೇರಿ 5 ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಬೆಂಗಳೂರು: ಬೆಂಗಳೂರಿನ ವಿಕ್ಟೋರಿಯಾ ಸೇರಿ 5 ಪ್ರಮುಖ ಸರ್ಕಾರಿ ಆಸ್ಪತ್ರೆಗಳಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಕ್ಟೋರಿಯಾ ಕೆ.ಸಿ.ಜನರಲ್, ಬೌರಿಂಗ್, ಕಿದ್ವಾಯಿ ಹಾಗೂ ಜಯದೇವ ಆಸ್ಪತ್ರೆಗಳಿಗೆ ಬರುವ ರೋಗಿಗಳು ಮತ್ತು ಅವರ ಸಂಬಂಧಿಕರಿಗೆ ಕಡಿಮೆ ದರದಲ್ಲಿ ಉತ್ತಮ ಆಹಾರ ನೀಡಬೇಕು. ಹೀಗಾಗಿ ಕ್ಯಾಂಟೀನ್‌ಗಳನ್ನು ನಿರ್ಮಿಸಲಾಗುವುದು ಎಂದರು.
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆ ಯೊಜನೆಯಾಗಿರುವ ಇಂದಿರಾ ಕ್ಯಾಂಟೀನ್’ಗೆ ಆಗಸ್ಟ್’ನಲ್ಲಿ ಬೆಂಗಳೂರಿನ 101 ವಾರ್ಡ್’ಗಳಲ್ಲಿ ಚಾಲನೆ ನೀಡಲಾಗಿದೆ.
