ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್’ರವರನ್ನು ವಿಮಾನನಿಲ್ದಾಣಗಳ ವಿಐಪಿಗಳ ಪಟ್ಟಿಯಿಂದ ತೆಗೆದು ಹಾಕಲಾಗಿದೆ.

ನವದೆಹಲಿ (ಸೆ.02): ಅತ್ಯಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಗುರ್ಮೀತ್ ರಾಮ್ ರಹೀಮ್ ಸಿಂಗ್’ರವರನ್ನು ವಿಮಾನನಿಲ್ದಾಣಗಳ ವಿಐಪಿಗಳ ಪಟ್ಟಿಯಿಂದ ತೆಗೆದು ಹಾಕಲಾಗಿದೆ.

ಎರಡು ಅತ್ಯಾಚಾರ ಪ್ರಕರಣಗಳಲ್ಲಿ ಗುರ್ಮೀತ್ ಸಿಂಗ್ 20 ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ.

ವಿಮಾನ ನಿಲ್ದಾಣಗಳಲ್ಲಿ ಗುರ್ಮೀತ್ ಸಿಂಗ್’ಗೆ ಒದಗಿಸಿರುವ ಪ್ರತ್ಯೇಕ ವಿಶ್ರಾಂತಿ ಕೋಣೆಯನ್ನು ಹಿಂತೆಗೆದುಕೊಳ್ಳಲಾಗಿದೆ. ಈ ಸಂಬಂಧ ವಿಮಾನ ನಿಲ್ದಾಣ ಅಧಿಕಾರಿಗಳಿಗೆ ಆದೇಶವನ್ನು ನೀಡಲಾಗಿದೆ ಎಂದು ನಾಗರೀಕ ವಿಮಾನಯಾನ ಸಚಿವಾಲಯ ತಿಳಿಸಿದೆ.