ಬೆಂಗಳೂರು ನಿವಾಸಿಯಾದ ವಿ.ಸಿ.ಪ್ರಕಾಶ್ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದು, ಎನ್‌ಆರ್‌ಐ ಫೋರಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು.

ತಮಿಳುನಾಡಿನ ಎಐಎಡಿಎಂಕೆ ಪಕ್ಷಕ್ಕೆ ಎರಡೆಲೆ ಚಿಹ್ನೆ ಕೊಡಿಸುವುದಾಗಿ ಹಣ ಪಡೆದ ಆರೋಪದ ಮೇಲೆ ಗೃಹ ಸಚಿವ ಜಿ.ಪರಮೇಶ್ವರ್ ಆಪ್ತ ಆರೋಪಿ ವಿ.ಸಿ ಪ್ರಕಾಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.ಬೆಂಗಳೂರು ನಿವಾಸಿಯಾದ ವಿ.ಸಿ.ಪ್ರಕಾಶ್ ಆಸ್ಟ್ರೇಲಿಯಾದಲ್ಲಿ ನೆಲೆಸಿದ್ದು, ಎನ್‌ಆರ್‌ಐ ಫೋರಂ ಸಂಸ್ಥೆಯ ಉಪಾಧ್ಯಕ್ಷರಾಗಿದ್ದರು. ತಮಿಳುನಾಡಿನ ಎಐಎಡಿಎಂಕೆ ಪಕ್ಷಕ್ಕೆ ಎರಡೆಲೆ ಚಿಹ್ನೆ ಕೊಡಿಸುವುದಾಗಿ ಹಣ ಪಡೆದು ವಂಚಿಸಿದ ಆರೋಪದ ಮೇಲೆ ಪ್ರಕಾಶ್ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿತ್ತು. ಇದೀಗ ದೆಹಲಿ ಕ್ರೈಂ ಬ್ರ್ಯಾಂಚ್ ಪೊಲೀಸರ ವಶದಲ್ಲಿರುವ ವಿ.ಸಿ ಪ್ರಕಾಶ್‌ನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.