ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ 18 ವಿಧಾನಸಭಾ ಕ್ಷೇತ್ರಗಳಿಂದ ಆಹ್ವಾನ ಬಂದಿದೆ

ಕೊರಟಗೆರೆ(ನ.04): ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವಂತೆ 18 ವಿಧಾನಸಭಾ ಕ್ಷೇತ್ರಗಳಿಂದ ಆಹ್ವಾನ ಬಂದಿದ್ದರೂ ನಾನು ಕೊರಟಗೆರೆ ವಿಧಾನಸಭಾ ಕ್ಷೇತ್ರದಿಂದಲೇ ಕಣಕ್ಕಿಳಿಯುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ. ಪರಮೇಶ್ವರ್ ಘೋಷಿಸಿದ್ದಾರೆ.

ತುಮಕೂರು ಜಿಲ್ಲೆಯ ಸಿದ್ದರಬೆಟ್ಟದಲ್ಲಿ ನಡೆದ ಬೂತ್ ಮಟ್ಟದ ಕಾಂಗ್ರೆಸ್ ಸದಸ್ಯರ ಸಭೆಯಲ್ಲಿ ಮಾತನಾಡಿ, ಸ್ಪರ್ಧಿಸುವುದಾದರೆ ಕೊರಟಗೆರೆ ಕ್ಷೇತ್ರದಿಂದ ಮಾತ್ರವೇ ಹೊರತು ಬೇರಾವ ಕ್ಷೇತ್ರಕ್ಕೂ ಹೋಗುವ ಪ್ರಮೇಯವೇ ಇಲ್ಲ ಎಂದರು.