ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯವೊಂದರ ಮುಖ್ಯಮಂತ್ರಿಯಾಗಿರಬಹುದು. ಆದರೆ, ಅವರು ತಮ್ಮ 2 ವರ್ಷದ ಮೊಮ್ಮಗನಿಗಿಂತ ಕಡಿಮೆ ಆಸ್ತಿ ಹೊಂದಿದ್ದಾರೆ.
ಹೈದರಾಬಾದ್: ಆಂಧ್ರಪ್ರದೇಶದ ಆಡಳಿತಾರೂಢ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರು ರಾಜ್ಯವೊಂದರ ಮುಖ್ಯಮಂತ್ರಿಯಾಗಿರಬಹುದು. ಆದರೆ, ಅವರು ತಮ್ಮ 2 ವರ್ಷದ ಮೊಮ್ಮಗನಿಗಿಂತ ಕಡಿಮೆ ಆಸ್ತಿ ಹೊಂದಿದ್ದಾರೆ.
ಚಂದ್ರಬಾಬು ನಾಯ್ಡು ಮತ್ತು ಅವರ ಕುಟುಂಬಸ್ಥರು ಶನಿವಾರ ತಮ್ಮ ಆಸ್ತಿ ಘೋಷಣೆ ಮಾಡಿಕೊಂಡಿದ್ದಾರೆ.
ಅದರ ಪ್ರಕಾರ, ನಾಯ್ಡು ಅವರ ಒಟ್ಟು ಸ್ಥಿರಾಸ್ತಿ ಮತ್ತು ಚರಾಸ್ತಿ ಸೇರಿ 8.37 ಕೋಟಿ ಮೌಲ್ಯದ ಆಸ್ತಿ ಹೊಂದಿದ್ದಾರೆ. ಅವರ ಅವರ ಮೊಮ್ಮಗನಾದ ನಾರಾ ದೇವಾಂಶ (2) ಹೆಸರಿನಲ್ಲಿ ಒಟ್ಟು 11 ಕೋಟಿ ರು. ಆಸ್ತಿ ಇದೆ.
