ನವದೆಹಲಿ (ಸೆ.12): ಕೇಂದ್ರ ಸಚಿವ ಸಂಪುಟವು ಸರಕು ಮತ್ತು ಸೇವಾ ತೆರಿಗೆ ಮಂಡಳಿ ರಚನೆಗೆ ಅನುಮೋದನೆ ನೀಡಿದೆ. ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸರಕು ಮತ್ತು ಸೇವಾ ತೆರಿಗೆಗೆ ಜಾರಿಗೆ ಒಪ್ಪಿಗೆ ನೀಡಿದ ನಂತರ ಸಂಪುಟವು ಸರಕು ಮತ್ತು ಸೇವಾ ತೆರಿಗೆ ಮಂಡಳಿ ರಚನೆಗೆ ಸಹಮತ ವ್ಯಕ್ತಪಡಿಸಿದೆ.
ಹೊಸ ತೆರಿಗೆ ನೀತಿ ಹೇಗೆ ಕಾರ್ಯ ನಿರ್ವಹಿಸುತ್ತದೆ, ಜಿಎಸ್’ಟಿ ತೆರಿಗೆ ದರ ಸೇರಿದಂತೆ ಬೇರೆ ಬೇರೆ ವಿಚಾರಗಳನ್ನು ನಿರ್ಧರಿಸುವ ಜವಾಬ್ದಾರಿ ಸರಕು ಮತ್ತು ಸೇವಾ ಮಂಡಳಿ (ಜಿಎಸ್ ಟಿ) ಮೇಲಿದೆ. ಕೇಂದ್ರ ವಿತ್ತ ಸಚಿವ ಅರುಣ್ ಜೇಟ್ಲಿ ಈ ಮಂಡಳಿಯ ನೇತೃತ್ವ ವಹಿಸಲಿದ್ದಾರೆ.
ಏಪ್ರಿಲ್ 1, 2017 ರಿಂದ ಜಿಎಸ್’ಟಿ ಯನ್ನು ಜಾರಿಗೊಳಿಸಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿದೆ.
