ಮನೆ ಕೊಳ್ಳುವವರಿಗೆ ಸಿಹಿ ಸುದ್ದಿ ನೀಡಿದ ಮೋದಿ ಸರ್ಕಾರ

First Published 26, Jan 2018, 12:39 PM IST
GST Relief for low cost homes 1st time buyers
Highlights

ಕೇಂದ್ರ ಬಜೆಟ್ ಮಂಡನೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮನೆ ಕೊಳ್ಳುವವರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.

ನವದೆಹಲಿ (ಜ.26): ಕೇಂದ್ರ ಬಜೆಟ್ ಮಂಡನೆಗೆ ಇನ್ನು ಕೆಲವೇ ದಿನಗಳು ಬಾಕಿ ಇರುವಾಗಲೇ ಕೇಂದ್ರ ಸರ್ಕಾರ ಮನೆ ಕೊಳ್ಳುವವರಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ.

ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಅಡಿಯಲ್ಲಿ ಬರುವ ಸಾಲ ಸಬ್ಸಿಡಿಯಲ್ಲಿ ಮೊದಲ ಬಾರಿ ಮನೆ ಖರೀದಿಸುವವರಿಗೆ ಜಿಎಸ್’ಟಿ ದರವನ್ನು ಇಳಿಕೆ ಮಾಡಲಾಗಿದೆ.

ಹಿಂದೆ ಇದ್ದ ಶೇ.12ರಷ್ಟು ಜಿಎಸ್’ಟಿ ದರವನ್ನು ಶೇ.8ಕ್ಕೆ ಕೇಂದ್ರ ಸರ್ಕಾರವು ಇಳಿಕೆ ಮಾಡಿದೆ.

ಈ ಯೋಜನೆಯ ಅಡಿಯಲ್ಲಿ ವಾರ್ಷಿಕವಾಗಿ 18 ಲಕ್ಷದವರೆಗೂ  ಆದಾಯ ಇರುವವರು  ಲಾಭವನ್ನು ಪಡೆದುಕೊಳ್ಳಲಿದ್ದಾರೆ.

loader