ಜಿಎಸ್‌ಟಿ ತೆರಿಗೆ ವ್ಯವಸ್ಥೆಯಿಂದ ಚಲನಚಿತ್ರ ರಂಗದ ಮೇಲೆ ತೆರಿಗೆ ಹೊರೆ ಹೆಚ್ಚಾಗಲಿದೆ. ಹೀಗಾಗಿ ಕನ್ನಡ ಚಿತ್ರಗಳ ಮೇಲೆ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರದಿಂದ ಯಾವ ರೀತಿ ತೆರಿಗೆ ಮರುಪಾವತಿ ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಗುವುದು. ಒಟ್ಟಾರೆ ಕನ್ನಡ ಚಿತ್ರೋದ್ಯಮಕ್ಕೆ ಜಿಎಸ್‌ಟಿ ಹೊರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಬೆಂಗಳೂರು(ಜೂ.20): ಜಿಎಸ್ಟಿ ತೆರಿಗೆ ವ್ಯವಸ್ಥೆಯಿಂದ ಚಲನಚಿತ್ರ ರಂಗದ ಮೇಲೆ ತೆರಿಗೆ ಹೊರೆ ಹೆಚ್ಚಾಗಲಿದೆ. ಹೀಗಾಗಿ ಕನ್ನಡ ಚಿತ್ರಗಳ ಮೇಲೆ ಹೊರೆ ಕಡಿಮೆ ಮಾಡಲು ರಾಜ್ಯ ಸರ್ಕಾರದಿಂದ ಯಾವ ರೀತಿ ತೆರಿಗೆ ಮರುಪಾವತಿ ಮಾಡಬಹುದು ಎಂಬ ಬಗ್ಗೆ ಚರ್ಚಿಸಲಾಗುವುದು. ಒಟ್ಟಾರೆ ಕನ್ನಡ ಚಿತ್ರೋದ್ಯಮಕ್ಕೆ ಜಿಎಸ್ಟಿ ಹೊರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.
ಸಿದ್ದರಾಮಯ್ಯ, ಬೇಡ ಕುಳಿತುಕೊಳ್ಳಮ್ಮಾ. ಯಾರೂ ಹೇಳಬಾರದು ಎಂದೇ ನಾನು ಹೇಳುತ್ತಿದ್ದೇನೆ. ಚಿತ್ರರಂಗದ ಪರವಾಗಿ ನಾವು ಇದ್ದೇವೆ. ಈವರೆಗೆ ನಾವು ಮಾಡಿದ ಕೆಲಸಗಳಿಂದ ಚಿತ್ರರಂಗಕ್ಕೆ ಅನುಕೂಲ ಆಗಿಲ್ವಾ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರಿಸಿದ ಜಯಮಾಲಾ, ಖಂಡಿತ ತುಂಬಾ ಅನುಕೂಲ ಆಗಿದೆ. ಸರ್ಕಾರದ ನೆರವಿನಿಂದಾಗಿ ಈ ಮೊದಲು ವರ್ಷಕ್ಕೆ 70 ಬರುತ್ತಿದ್ದ ಕನ್ನಡ ಸಿನಿಮಾ ಈಗ 200 ರಷ್ಟಾಗಿದೆ. ಚಿತ್ರರಂಗ ಇನ್ನೂ ಬೆಳವಣಿಗೆ ಆಗಲು ಈ ತೆರಿಗೆ ಹೊರೆ ಇಳಿಸಬೇಕು ಎಂದು ಮನವಿ ಮಾಡಿದರು. ಪ್ರತಿಕ್ರಿಯಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಕನ್ನಡ ಚಿತ್ರರಂಗದ ಬೆಳವಣಿಗೆಗೆ ನಾವು ಸಹಕಾರ ನೀಡಲು ಬದ್ಧವಾಗಿದ್ದೇವೆ. ಚಿತ್ರಗಳಿಗೆ ತೆರಿಗೆ ಮರುಪಾವತಿ ಹೇಗೆ ಮಾಡಬಹುದು ಎಂಬುದರ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
