, ಇಂದಿರಾಗಾಂಧಿ ಪ್ರಧಾನಿಯಾಗಿದ್ದರೆ ಸಿದ್ದರಾಮಯ್ಯ ಅವರನ್ನು ಯಾವಾಗಲೋ ಕಾಂಗ್ರೆಸ್ ಪಕ್ಷದಿಂದ ತೆಗೆದು ಹಾಕುತ್ತಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಸತ್ತು ಹೋಗಿದೆ.
ಮೈಸೂರು(ನ.06): ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. 2019ರ ಲೋಕಸಭಾ ಚುನಾವಣೆಗೆ ಅವರೇ ಕಾಂಗ್ರೆಸ್‌ನ ಪ್ರಧಾನಿ ಅಭ್ಯರ್ಥಿ. ಹೀಗಾಗಿ ಅವರನ್ನು ಕಂಡರೆ ಪ್ರಧಾನಿ ನರೇಂದ್ರ ಮೋದಿ ಹೆದರುತ್ತಾರೆ.’-ಇದು ಸಿದ್ದರಾಮಯ್ಯ ಅವರನ್ನು ಕಂಡರೆ ಪ್ರಧಾನಿ ಮೋದಿ ಹೆದರುತ್ತಾರೆ ಎಂದಿರುವ ಕಾಂಗ್ರೆಸ್ ನಾಯಕರ ಹೇಳಿಕೆಗೆ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಸಚಿವ ಜಿ.ಟಿ. ದೇವೇಗೌಡ ಟಾಂಗ್ ನೀಡಿರುವ ಪರಿ.
ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾಗಾಂಧಿ ಪ್ರಧಾನಿಯಾಗಿದ್ದರೆ ಸಿದ್ದರಾಮಯ್ಯ ಅವರನ್ನು ಯಾವಾಗಲೋ ಕಾಂಗ್ರೆಸ್ ಪಕ್ಷದಿಂದ ತೆಗೆದು ಹಾಕುತ್ತಿದ್ದರು. ಕೇಂದ್ರದಲ್ಲಿ ಕಾಂಗ್ರೆಸ್ ಸತ್ತು ಹೋಗಿದೆ. ರಾಹುಲ್‌ಗಾಂಧಿ ಕೈಲಿ ಏನೂ ಆಗುತ್ತಿಲ್ಲ. ಹೀಗಾಗಿ ಸಿದ್ದರಾಮಯ್ಯ ಪ್ರಧಾನಿ ಸ್ಥಾನಕ್ಕೆ ಪ್ರಬಲ ಅಭ್ಯರ್ಥಿ ಯಾಗಿದ್ದಾರೆ ಎಂದರು.

