ಗಾಂಧಿನಗರ: ಲೋಕಸಭೆ ಚುನಾವಣೆಗೂ ಮುನ್ನ ಕಾಂಗ್ರೆಸ್‌ ತ್ಯಜಿಸಿದ್ದ ಗುಜರಾತಿನ ಒಬಿಸಿ ನಾಯಕ ಅಲ್ಪೇಶ್‌ ಠಾಕೂರ್‌ ಸೋಮವಾರ ಉಪಮುಖ್ಯಮಂತ್ರಿ ನಿತಿನ್‌ಭಾಯ್‌ ಪಟೇಲ್‌ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

 ಹೀಗಾಗಿ ಠಾಕೂರ್‌ ಬಿಜೆಪಿಗೆ ಸೇರ್ಪಡೆಯಾಗಬಹುದು ಎನ್ನಲಾಗುತ್ತಿದೆ. 2017ರ ಗುಜರಾತ್‌ ವಿಧಾನಸಭೆ ಚುನಾವಣೆಗೂ ಮುನ್ನ ಅಲ್ಪೇಶ್‌ ಕಾಂಗ್ರೆಸ್‌ ಸೇರಿ, ಪಠಾಣ್‌ ಜಿಲ್ಲೆಯ ರಾಧಾನ್‌ಪುರನಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರು. 

2019ರ ಏಪ್ರಿಲ್‌ನಲ್ಲಿ ಕಾಂಗ್ರೆಸ್‌ ತೊರೆದಿದ್ದರು. ಅವರು ಬಿಜೆಪಿಗೆ ಸೇರ್ಪಡೆಯಾಗಬಹುದು ಎಂಬ ಬಗ್ಗೆ ವದಂತಿಗಳು ಹಬ್ಬಿದ್ದವು. ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದ್ದ ಕೆಲವೇ ದಿನಗಳಲ್ಲಿ ಅಲ್ಪೇಶ್‌ ಅವರು ಗುಜರಾತ್‌ ಡಿಸಿಎಂ ಭೇಟಿ ಮಾಡಿರುವುದು ಮಹತ್ವ ಪಡೆದುಕೊಂಡಿದೆ.