ಗುರುಗ್ರಾಮ್(ಮಾ.23): ಮನೆ ಮುಂದೆ ಕ್ರಿಕೆಟ್ ಆಡಿದ ಕ್ಷುಲ್ಲಕ ಕಾರಣಕ್ಕೆ ಇಡೀ ಕುಟುಂಬದ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಗುರುಗ್ರಾಮ್ ದಲ್ಲಿ ನಡೆದಿದೆ.

ಹುಡುಗರ ಗುಂಪೊಂದು ಮನೆ ಮುಂದೆ ಕ್ರಿಕೆಟ್ ಆಡುತ್ತಿದ್ದಾಗ ಅಲ್ಲಿಗೆ ಧಾವಿಸಿದ ಯುವಕರ ಗುಂಪೊಂದು, ಇಲ್ಲೇಕೆ ಕ್ರಿಕೆಟ್ ಆಡುತ್ತಿದ್ದೀರಿ ಪಾಕಿಸ್ತಾನಕ್ಕೆ ಹೋಗಿ ಆಡಿ ಎಂದು ಹೇಳಿ ಹಲ್ಲೆ ನಡೆಸಿದೆ.

ಕೂಡಲೇ ಮನೆಯೊಳಗೆ ನುಗ್ಗಿದ ಆಗುಂತಕ ಗುಂಪು, ಹಾಕಿ ಸ್ಟಿಕ್ ಮತ್ತು ಕಬ್ಬಿಣದ ರಾಡ್ ಗಳಿಂದ ಕುಟುಂಬದ ಮೇಲೆ ಹಲ್ಲೆ ನಡಿಸಿದೆ. ಮಹಿಳೆಯರು ಮಕ್ಕಳು ಎನ್ನದೇ ಕುಟುಂಬದ ಸದಸ್ಯರ ಮೇಲೆ ಮಾರಣಾಂತಿಕ ಹಲ್ಲೆ ಮಾಡಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದೆ.

ಇನ್ನು ಘಟನೆಯನ್ನು ತೀವ್ರವಾಗಿ ಖಂಡಿಸಿರುವ ದೆಹಲಿ ಸಿಎಂ ಅರವಿಮದ್ ಕೇಜ್ರಿವಾಲ್, ಹಿಟ್ಲರ್ ಹಾದಿಯಲ್ಲಿರುವ ಪ್ರಧಾನಿ ಮೋದಿ, ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ದೌರ್ಜನ್ಯಕ್ಕೆ ಪರೋಕ್ಷ ಬೆಂಬಲ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಇನ್ನು ಘಟನೆಗೆ ಸಂಬಂಧಿಸಿದಂತೆ ಓರ್ವನನ್ನು ಬಂಧಿಸಲಾಗಿದ್ದು, ಗುರುಗ್ರಾಮ್ ದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.