ಅಫ್ಜಲ್‌ಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸಮ್ಮುಖದಲ್ಲಿ ಭಾನುವಾರ ಬಿಜೆಪಿ ಸೇರ್ಪಡೆಗೊಂಡರು.

ನವದೆಹಲಿ : ಅಫ್ಜಲ್‌ಪುರದ ಶಾಸಕ ಮಾಲೀಕಯ್ಯ ಗುತ್ತೇದಾರ್‌ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರ ಸಮ್ಮುಖದಲ್ಲಿ ಭಾನುವಾರ ಬಿಜೆಪಿ ಸೇರ್ಪಡೆಗೊಂಡರು.

ದೆಹಲಿಯ ದೀನ್‌ ದಯಾಳ್‌ ಉಪಾಧ್ಯಾಯ ಮಾರ್ಗದಲ್ಲಿನ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಶಾ ಅವರನ್ನು ಭಾನುವಾರ ಭೇಟಿಯಾಗಿ ಗುತ್ತೇದಾರ್‌ ಪಕ್ಷದ ಪ್ರಾಥಮಿಕ ಸದಸ್ಯತ್ವ ಪಡೆದರು. ಆರು ಬಾರಿ ವಿಧಾನಸಭಾ ಸದಸ್ಯರಾಗಿರುವ ಮಾಲೀಕಯ್ಯ ಗುತ್ತೇದಾರ್‌, ಇತ್ತೀಚೆಗಷ್ಟೆಪಕ್ಷದ ವರಿಷ್ಠರ ಜತೆಗೆ ಮುನಿಸಿಕೊಂಡು ಕಾಂಗ್ರೆಸ್‌ ತೊರೆದಿದ್ದರು.

ಕಲಬುರ್ಗಿ ಸಂಸದ, ಕೇಂದ್ರದಲ್ಲಿ ಕಾಂಗ್ರೆಸ್‌ ಸಂಸದೀಯ ನಾಯಕರಾಗಿರುವ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಬಹಿರಂಗವಾಗಿಯೇ ಹರಿಹಾಯ್ದಿದ್ದ ಅವರು, ಈ ಬಾರಿ ಖರ್ಗೆ ಕುಟುಂಬಕ್ಕೆ ತಕ್ಕ ಪಾಠ ಕಲಿಸುವ ಎಚ್ಚರಿಕೆಯನ್ನೂ ನೀಡಿದ್ದರು. ಬಿಎಸ್ಸಾರ್‌ ಕಾಂಗ್ರೆಸ್‌ನಲ್ಲಿದ್ದ ಯಾದಗಿರಿ ನಗರಸಭೆ ಅಧ್ಯಕ್ಷೆ ಲಲಿತಾ ಅಂಪೂರ್‌ ಅವರು ಕೂಡ ಇದೇ ವೇಳೆ ಬಿಜೆಪಿ ಸೇರಿದರು.