ಸಚಿವ ಸಂಪುದಲ್ಲಿ ತಮ್ಮ ಸಮುದಾಯಕ್ಕೆ ಸ್ಥಾನ ನೀಡಲ್ಲವೆಂದು ಕಾಂಗ್ರೆಸ್ ನ ಮಾಜಿ ಸಚಿವ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು, [ಸೆ.29]: ಸಂಪುಟದಲ್ಲಿ ಮಾದಿಗ ಸಮುದಾಯಕ್ಕೆ ಅವಕಾಶ ನೀಡಿಲ್ಲ. ಇದು ನನಗೆ ತುಂಬಾ ನೋವನ್ನುಂಟು ಮಾಡಿದೆ ಎಂದು ಮಾಜಿ ಸಚಿವ ಹೆಚ್​.ಆಂಜನೇಯ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೂಪಾ ಶಶಿಧರ್ ಶಾಸಕಿಯಾಗಿದ್ದಾರೆ. ಧರ್ಮಸೇನ, ಆರ್.ಬಿ.ತಿಮ್ಮಾಪುರ ಮೇಲ್ಮನೆ ಸದಸ್ಯರಿದ್ದಾರೆ. ಇವರಲ್ಲಿ ಒಬ್ಬರಿಗೆ ಅವಕಾಶ ನೀಡಬೇಕು. ಈ ಬಗ್ಗೆ ಹೈಕಮಾಂಡ್ ಹಾಗೂ ರಾಜ್ಯ ನಾಯಕರಿಗೆ ಮನವಿ ಮಾಡಿದ್ದು, ಸಂಪುಟ ವಿಸ್ತರಣೆ ವೇಳೆ ಅವಕಾಶ ನೀಡುವ ವಿಶ್ವಾಸವಿದೆ ಎಂದರು.

ಈ ಹಿಂದೆ ಮಾದಿಗ ಸಮುದಾಯಕ್ಕೆ ಉತ್ತಮ ಅವಕಾಶ ನೀಡಲಾಗಿತ್ತು. ಸಿದ್ದರಾಮಯ್ಯ ತಮ್ಮ ಅಧಿಕಾರವಧಿಯಲ್ಲಿ ಹೆಚ್ಚಿನ ಆದ್ಯತೆ ನೀಡಿದ್ದರು. ಅವರೇ ನಮ್ಮ ಸಮುದಾಯಕ್ಕೆ ಅಭಿವೃದ್ಧಿ ನಿಗಮ ಕೂಡಾ ಮಾಡಿದ್ದಾರೆ ಎಂದು ಹೇಳಿದರು.

ಇನ್ನು ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವ ವಿಚಾರವಾಗಿ ಮಾತನಾಡಿ, ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಇಚ್ಚೆ ನನಗಿಲ್ಲ. ಪಕ್ಷ ಯಾರಿಗೆ ಟಿಕೆಟ್ ಕೊಡುತ್ತೋ ಅವರ ಪರ ಕೆಲಸ ಮಾಡ್ತೇವೆ. ನಾನು ಮೊದಲು ಪಕ್ಷದ ಯೂವ ಘಟಕದ ನಾಯಕನಾಗಿದ್ದವನು. ಪಕ್ಷಕ್ಕಾಗಿ ಸಾಕಷ್ಟು ದುಡಿದಿದ್ದೇನೆ. ಅದನ್ನ ನೋಡಿ ಈಗ ಉತ್ತಮ ಸ್ಥಾನಮಾನ ನೀಡಬಹುದು ಎಂಬ ವಿಶ್ವಾಸವಿದೆ ಎಂದರು.