ರಾಜಕಾರಣದಲ್ಲಿ ಇದೆಲ್ಲಾ ಸಹಜ, ಮುಂದೆ ನೋಡೋಣ ಎಂದು ಹೇಳಿದ್ದಾರೆ.
ಬೆಂಗಳೂರು(ಮಾ.20): ಪಕ್ಷದಲ್ಲಿ ಕಡೆಗಣಿಸಲಾಗುತ್ತಿರುವ ಕಾಂಗ್ರೆಸ್ ಹಿರಿಯ ಮುಖಂಡ ಹೆಚ್.ವಿಶ್ವನಾಥ್ ಮಾತೃಪಕ್ಷ ತೊರೆದು ಜೆಡಿಎಸ್'ಗೆ ಸೇರ್ತಾರಾ? ಅಂತಹದೊಂದು ಸುದ್ದಿ ಇತ್ತೀಚಿನ ದಿನಗಳಲ್ಲಿ ಹಲವು ಕಡೆ ಹರಿದಾಡುತ್ತಿದೆ.
ಅಲ್ಲದೆ ಈ ಬಗ್ಗೆ ನಿನ್ನೆಯಷ್ಟೆ ಜೆಡಿಎಸ್ ಸಂಸದ ಸಿ.ಎಸ್. ಪುಟ್ಟರಾಜು ಸುದ್ದಿಗಾರರೊಂದಿಗೆ ಮಾತನಾಡಿ, ವಿಶ್ವನಾಥ್ ಅವರನ್ನು ನಾನು ನಮ್ಮ ಪಕ್ಷಕ್ಕೆ ಆಹ್ವಾನಿಸಿದ್ದೇನೆ. ಅವರಿಗೂ ಜೆಡಿಎಸ್'ಗೂ ಸೇರ್ಪಡೆ ಬಗ್ಗೆ ಒಲವು ಇದೆ. ಸಮಯ ಬಂದಾಗ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಅವರು ತಿಳಿಸಿದ್ದಾರೆ' ಎಂದು ತಿಳಿಸಿದ್ದಾರೆ.
ಈ ಬಗ್ಗೆ ಸುವರ್ಣ ನ್ಯೂಸ್'ನೊಂದಿಗೆ ಸ್ವತಃ ಸ್ಪಷ್ಟಿಕರಣ ನೀಡಿರುವ ಹೆಚ್.ವಿಶ್ವನಾಥ್ ಅವರು, ಜೆಡಿಎಸ್ನಿಂದ ಆಹ್ವಾನ ಬಂದಿಲ್ಲ. ಜೆಡಿಎಸ್ಗೆ ಸೇರಿ ಎಂದು ನನಗೆ ಯಾರೂ ಆಹ್ವಾನ ನೀಡಿಲ್ಲ. ಜೆಡಿಎಸ್ಗೆ ಸೇರುವ ಬಗ್ಗೆ ಯಾವುದೇ ತೀರ್ಮಾನ ಮಾಡಿಲ್ಲ. ರಾಜಕಾರಣದಲ್ಲಿ ಇದೆಲ್ಲಾ ಸಹಜ, ಮುಂದೆ ನೋಡೋಣ ಎಂದು ಹೇಳಿದ್ದಾರೆ.
