ಬೆಂಗಳೂರು[ಡಿ.28]  ಐಪಿಎಸ್​ ಅಧಿಕಾರಿ ಮಧುಕರ್ ಶೆಟ್ಟಿ ಹೈದರಾಬಾದ್​​​​ನಲ್ಲಿ ಕೊನೆ ಉಸಿರೆಳೆದಿದ್ದಾರೆ.  ಎಚ್​1ಎನ್​1, ಶ್ವಾಸಕೋಶದ ಸೋಂಕಿನಿಂದ ಬಳುತ್ತಿದ್ದ ಮಧುಕರ್ ಶೆಟ್ಟಿ  ಹೈದರಾಬಾದ್​​​​ನ ಕಾಂಟಿನೆಂಟಲ್​​ ಆಸ್ಪತ್ರೆಯಲ್ಲಿ ವಿಧಿವಶರಾಗಿದ್ದಾರೆ.

1 ವಾರದಿಂದ ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದರು. 1999ರ ಬ್ಯಾಚ್​​ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ   ಬೆಂಗಳೂರು ಗ್ರಾಮಾಂತರ ಜಿಲ್ಲೆ, ಚಾಮರಾಜನಗರ ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ ಸೇರಿ ರಾಜ್ಯದ ಹಲವೆಡೆ ಸೇವೆ ಸಲ್ಲಿಸಿದ್ದರು.

ಎಚ್‌1 ಎನ್‌1 ಹಂದಿಜ್ವರದ ಲಕ್ಷಣಗಳು ಏನು?

ಲೋಕಾಯುಕ್ತ ಸಂಸ್ಥೆಯಲ್ಲಿ ಖಡಕ್​ ಅಧಿಕಾರಿಯಾಗಿದ್ದ ಮಧುಕರ್ ಶೆಟ್ಟಿ  2011ರಲ್ಲಿ ಉನ್ನತ ಶಿಕ್ಷಣಕ್ಕಾಗಿ ರಜೆ ಮೇಲೆ ತೆರಳಿದ್ದರು. 2011ರಲ್ಲಿ ಉನ್ನತ ಶಿಕ್ಷಣಕ್ಕಾಗಿ ರಜೆ ಮೇಲೆ ತೆರಳಿದ್ದ ಮಧುಕರ್​ ಶೆಟ್ಟಿ ನಂತರ ರಾಜ್ಯ ಐಜಿಪಿಯಾಗಿ ಬಡ್ತಿ ಪಡೆದಿದ್ದರು.

ಕೆಲ ಕಾಲ ಪೊಲೀಸ್​ ನೇಮಕಾತಿ ವಿಭಾಗದ ನಿರ್ದೇಶಕರಾಗಿ ಸೇವೆ ಸಲ್ಲಿಸಿ 2017ರಿಂದ ಹೈದರಾಬಾದ್​​ ಪೊಲೀಸ್ ಅಕಾಡೆಮಿಯಲ್ಲಿ ಡೆಪ್ಯುಟಿ ಡೈರೆಕ್ಟರ್  ಆಗಿ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದರು.   18 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಮಧುಕರ್ ಶೆಟ್ಟಿ ಅವರ ನಿಧನಕ್ಕೆ ಶಾಸಕ ಸುರೇಶ್ ಕುಮಾರ್ ಸಂತಾಪ ಸೂಚಿಸಿದ್ದಾರೆ.