ಕಿಡಿಗೇಡಿಗಳ ಕಾಟಕ್ಕೆ ಬೇಸತ್ತ ಹಾಸ್ಟೆಲ್ ವಿದ್ಯಾರ್ಥಿನಿಯರು

First Published 27, Mar 2018, 9:52 AM IST
Harassment in Koppala Hostel
Highlights

ಗಂಗಾವತಿ ನಗರದಲ್ಲಿ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಿಡಿಗೇಡಿಗಳ ಕಾಟ ಜಾಸ್ತಿಯಾಗಿದೆ. ಗಂಗಾವತಿ ನಗರದ ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಿಡಿಗೇಡಿಗಳು ಪ್ರತಿದಿನ ರಾತ್ರಿ ಕುಡಿದು ಬಂದು ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ಕೊಪ್ಪಳ (ಮಾ.27): ಗಂಗಾವತಿ ನಗರದಲ್ಲಿ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಿಡಿಗೇಡಿಗಳ ಕಾಟ ಜಾಸ್ತಿಯಾಗಿದೆ. ಗಂಗಾವತಿ ನಗರದ ಹಿಂದುಳಿದ ವರ್ಗದ ಮೆಟ್ರಿಕ್ ನಂತರದ ವಸತಿ ನಿಲಯದ ವಿದ್ಯಾರ್ಥಿನಿಯರಿಗೆ ಕಿಡಿಗೇಡಿಗಳು ಪ್ರತಿದಿನ ರಾತ್ರಿ ಕುಡಿದು ಬಂದು ಕಿರುಕುಳ ನೀಡುತ್ತಿದ್ದಾರೆ ಎಂದು ವಿದ್ಯಾರ್ಥಿನಿಯರು ಆರೋಪಿಸಿದ್ದಾರೆ.

ರಾತ್ರಿ ಸಮಯದಲ್ಲಿ ದುಷ್ಕರ್ಮಿಗಳು ಹಾಸ್ಟೆಲ್ ಹತ್ತಿರ ಕುಡಿದು ಬಂದು ಕೂಗಾಡೋದು, ಹಾಸ್ಟೆಲ್ ಮೇಲೆ ಬ್ಯಾಟರಿ ಬಿಡೋದು ಕೆಟ್ಟ ರೀತಿಯಲ್ಲಿ ಬೈಯೋದು ಮಾಡುತ್ತಾರಂತೆ. ಕಿಡಿಗೇಡಿಗಳ ಉಪಟಳದಿಂದ ಬೇಸತ್ತು ವಿದ್ಯಾರ್ಥಿನಿಯರು ಹಾಸ್ಟೆಲ್ ತೊರೆಯುತ್ತಿದ್ದಾರೆ. ಈ ಹಿಂದೆ ಎರಡು ಬಾರಿ ಕಿಡಿಗೇಡಿಗಳು ವಿದ್ಯಾರ್ಥಿಗಳಿಗೆ ಕಾಟ ಕೊಟ್ಟಿದ್ರು. ಈ ಬಗ್ಗೆ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಅಂತ ವಿದ್ಯಾರ್ಥಿನಿಯರು ಆತಂಕ ವ್ಯಕ್ತಪಡಿಸಿದ್ದಾರೆ. ಅಲ್ದೇ ಸೂಕ್ತ ಭದ್ರತೆ ನೀಡುವಂತೆ ಆಗ್ರಹಿಸಿ ಗಂಗಾವತಿ ನಗರ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ್ದಾರೆ. 
 

loader