ತೊಗಾಡಿಯಾ ಭೇಟಿಯಾದ ಹಾರ್ದಿಕ್ ಪಟೇಲ್

First Published 16, Jan 2018, 3:53 PM IST
Hardik Patel Meets VHP President Praveen Togadiya
Highlights

ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಶ್ವ ಹಿಂದೂ ಪರಿಷತ್ತು ನಾಯಕ ಪ್ರವೀಣ್ ತೊಗಾಡಿಯಾ ಅವರನ್ನು ಗುಜರಾತ್’ನ ಪತಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಹಾಗೂ ಕಾಂಗ್ರೆಸ್ ನಾಯಕ ಅರ್ಜುನ್ ಮೋದ್ವಾಡಿಯಾ ಇಂದು ಭೇಟಿಯಾಗಿದ್ದಾರೆ.

ಅಹಮದಾಬಾದ್: ಆಸ್ಪತ್ರೆಯಲ್ಲಿ ದಾಖಲಾಗಿರುವ ವಿಶ್ವ ಹಿಂದೂ ಪರಿಷತ್ತು ನಾಯಕ ಪ್ರವೀಣ್ ತೊಗಾಡಿಯಾ ಅವರನ್ನು ಗುಜರಾತ್’ನ ಪತಿದಾರ್ ಸಮುದಾಯದ ನಾಯಕ ಹಾರ್ದಿಕ್ ಪಟೇಲ್ ಹಾಗೂ ಕಾಂಗ್ರೆಸ್ ನಾಯಕ ಅರ್ಜುನ್ ಮೋದ್ವಾಡಿಯಾ ಇಂದು ಭೇಟಿಯಾಗಿದ್ದಾರೆ.

ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ವಿಶ್ವ ಹಿಂದೂ ಪರಿಷತ್ ಮುಖಂಡ  ಪ್ರವೀಣ್ ತೊಗಾಡಿಯಾ ಆಸ್ಪತ್ರೆಯಲ್ಲಿಯೇ ಇಂದು ಸುದ್ದಿಗೋಷ್ಠಿ ನಡೆಸಿದ್ದಾರೆ. ತನ್ನ ಸದ್ದಡಗಿಸುವ ಪ್ರಯತ್ನ ಮಾಡಲಾಗುತ್ತಿದೆ. ನನ್ನನ್ನು ಟಾರ್ಗೆಟ್ ಮಾಡಿದ್ದಾರೆ ಎಂದು ಹೇಳಿದ್ದಾರೆ.

ನಾನು ನಿನ್ನೆ ಪೂಜೆ ಮಾಡುತ್ತಿರುವ ಸಂದರ್ಭದಲ್ಲಿ ರಾಜಸದ್ಥಾನ ಪೊಲೀಸರು ಮನೆಯೊಳಗೆ ನುಗ್ಗಿದ್ದಾರೆ. ನನ್ನನ್ನು ಎನ್’ಕೌಂಟರ್’ನಲ್ಲಿ ಕೊಲ್ಲಲಾಗುವುದು ಎಂದು ಓರ್ವ ನನಗೆ ಹೇಳಿದ, ಎಂದು ಪ್ರವೀಣ್ ತೊಗಾಡಿಯಾ ಹೇಳಿದ್ದಾರೆ. 

ನಿನ್ನೆ ನಾಪತ್ತೆಯಾಗಿದ್ದ ವಿಎಚ್’ಪಿ ಅಂತಾರಾಷ್ಟ್ರೀಯ ಕಾರ್ಯಾಧ್ಯಕ್ಷ ತೊಗಾಡಿಯಾ ಅವರು ಸೋಮವಾರ ಅಹಮದಾಬಾದ್’ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಬಳಿಕ ಅವರನ್ನು ಇಲ್ಲಿನ ಚಂದ್ರಮಣಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ.

 

loader