ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಪರವಾಗಿ ಪತೀದಾರ್ ಕೋಟಾ ರುವಾರಿ, ಫೈರ್ ಬ್ರಾಂಡ್ ಹಾರ್ದಿಕ್ ಪಟೇಲ್ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

ಮುಂಬೈ (ಫೆ.07): ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಶಿವಸೇನೆ ಪರವಾಗಿ ಪತೀದಾರ್ ಕೋಟಾ ರುವಾರಿ, ಫೈರ್ ಬ್ರಾಂಡ್ ಹಾರ್ದಿಕ್ ಪಟೇಲ್ ಚುನಾವಣಾ ಪ್ರಚಾರ ಮಾಡಲಿದ್ದಾರೆ ಎಂದು ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಹೇಳಿದ್ದಾರೆ.

182 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಪ್ರಸ್ತುತ ಗುಜರಾತ್ ನಲ್ಲಿ ಆಡಳಿತ ವಿರೋಧಿ ಅಲೆ ಎದ್ದಿದ್ದು ಅದನ್ನು ಎದುರಿಸುವ ಸವಾಲು ಭಾರತೀಯ ಜನತಾ ಪಕ್ಷದ ಮುಂದಿದೆ.

ಹಾರ್ದಿಕ್ ಪಟೇಲ್ ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆಯವರ ದೊಡ್ಡ ಅಭಿಮಾನಿಯಾಗಿದ್ದು, ಶಿವಸೇನೆಯ ಪರವಾಗಿ ಪ್ರಚಾರ ಕೈಗೊಳ್ಳಲಿದ್ದಾರೆ ಎಂದು ಉದ್ಧವ್ ಠಾಕ್ರೆ ಜಂಟಿ ಪತ್ರಿಕಾಗೋಷ್ಟಿಯಲ್ಲಿ ಹೇಳಿದ್ದಾರೆ.