ಜಾಟ್ ಸಮುದಾಯವನ್ನು ಕೇಂದ್ರ ಸರ್ಕಾರ ಒಬಿಸಿ ಎಂದು ಘೋಷಿಸಬೇಕು, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು,ಹರ್ಯಾಣ ಸರ್ಕಾರದಲ್ಲಿರುವ ನಮ್ಮ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು, ಹೋರಾಟಲ್ಲಿ ಕೈಗೊಂಡ ನಮ್ಮ ಜನರ ಕುಟುಂಬಗಳಿಗೆ ಪರಿಹಾರ ನೀಡಬೇಕು ಅಲ್ಲದೆ ಆ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು  

ನವದೆಹಲಿ(ಮಾ.02): ಮೀಸಲಾತಿ ಸೇರಿದಂತೆ ನಮ್ಮ ಹಲವು ಬೇಡಿಕೆಗಳನ್ನು ಈಡೇರಿಸದಿದ್ದರೆಮಾರ್ಚ್ 20 ರಂದು ರಾಷ್ಟ್ರ ರಾಜಧಾನಿಯನ್ನು ಬಂದ್ ಮಾಡುತ್ತೇವೆ ಎಂದು ಅಖಿಲ ಭಾರತ ಜಾಟ್ ಆರಕ್ಷಣ ಸಂಘರ್ಷ ಸಮಿತಿ ಕೇಂದ್ರಕ್ಕೆ ಎಚ್ಚರಿಕೆ ನೀಡಿದೆ.

ಜಾಟ್ ಸಮುದಾಯವನ್ನು ಕೇಂದ್ರ ಸರ್ಕಾರ ಒಬಿಸಿ ಎಂದು ಘೋಷಿಸಬೇಕು, ಶಿಕ್ಷಣ ಹಾಗೂ ಉದ್ಯೋಗದಲ್ಲಿ ಮೀಸಲಾತಿ ನೀಡಬೇಕು,ಹರ್ಯಾಣ ಸರ್ಕಾರದಲ್ಲಿರುವ ನಮ್ಮ ಎಲ್ಲ ಪ್ರಕರಣಗಳನ್ನು ಹಿಂಪಡೆಯಬೇಕು, ಹೋರಾಟಲ್ಲಿ ಕೈಗೊಂಡ ನಮ್ಮ ಜನರ ಕುಟುಂಬಗಳಿಗೆ ಪರಿಹಾರ ನೀಡಬೇಕು ಅಲ್ಲದೆ ಆ ಕುಟುಂಬದ ಸದಸ್ಯರೊಬ್ಬರಿಗೆ ಉದ್ಯೋಗ ನೀಡಬೇಕು ಎಂದು ಅಖಿಲ ಭಾರತ ಜಾಟ್ ಆರಕ್ಷಣ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಯಶಪಾಲ್ ಮಲ್ಲಿಕ್ ಆಗ್ರಹಿಸಿದ್ದಾರೆ.

ನಮ್ಮ ಮನವಿಯನ್ನು ಪರಿಗಣಿಸದಿದ್ದರೆ ಸಂಸತ್ತಿಗೆ ಮುತ್ತಿಗೆ ಹಾಕಲಾಗುವುದು ಜೊತೆಗೆ ನಮ್ಮ ವಿದ್ಯುತ್, ನೀರಿನ ಬಿಲ್ಲನ್ನು ಪಾವತಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.

ದೆಹಲಿಯ ಜಂತರ್ ಮಂತರ್'ನಲ್ಲಿಉತ್ತರ ಪ್ರದೇಶ, ಹರ್ಯಾಣ, ಉತ್ತರಖಂಡ್, ದೆಹಲಿ ಹಾಗೂ ಪಂಜಾಬ್ ನಿಂದ ಆಗಮಿಸಿದ್ದ 5 ಸಾವಿರಕ್ಕೂ ಹೆಚ್ಚು ಜಾಟರು ಪ್ರತಿಭಟನೆ ಕೈಗೊಂಡಿದ್ದರು.