ನವದೆಹಲಿ (ಅ. 05): ಸರ್ಜಿಕಲ್ ದಾಳಿ ನಡೆದಿರುವ ಬಗ್ಗೆ ಸರ್ಕಾರ ಪುರಾವೆ ಒದಗಿಸಬೇಕೆಂದು ಪ್ರತಿಪಕ್ಷಗಳು ಕೇಳುತ್ತಿರುವುದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವ ಕಿರಣ್ ರಿಜಿಜು, ಸರ್ಕಾರ ಹಾಗೂ ಭಾರತೀಯ ಸೇನೆ ಮೇಲೆ ವಿಶ್ವಾಸವಿಡುವಂತೆ ಕರೆ ನೀಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರ್ಜಿಕಲ್ ದಾಳಿ ನಡೆದಿರುವ ಬಗ್ಗೆ ಕೆಲ ರಾಜಕೀಯ ನಾಯಕರು ಪುರಾವೆ ಕೇಳುತ್ತಿರುವುದಕ್ಕೆ ಮಾಧ್ಯಮದವರು ಪ್ರತಿಕ್ರಿಯೆ ಬಯಸಿದಾಗ ರಿಜಿಜು, ಭಾರತೀಯ ಸೇನೆ ಮೇಲೆ ವಿಶ್ವಾಸವಿಡಿ ಹಾಗೂ ಅದನ್ನು ಕೇಂದ್ರ ಸರ್ಕಾರಕ್ಕೆ ಬಿಟ್ಟುಬಿಡಿ ಎಂದು ಹೇಳಿದ್ದಾರೆ.

ಸರ್ಜಿಕಲ್ ದಾಳಿಗೆ ಕೇಂದ್ರ ಸರ್ಕಾರ ಪುರಾವೆ ಒದಗಿಸಬೇಕೆಂದು ಕಾಂಗ್ರೆಸ್ ನಾಯಕ ಸಂಜಯ್ ನಿರುಪಮ್, ಚಿದಂಬರಂ, ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಳೆದ ದಿನಗಳಲ್ಲಿ ಆಗ್ರಹಿಸಿದ್ದರು.